ಗ್ರಾಮ ಪಂಚಾಯತ ಅಭ್ಯರ್ಥಿ ಆತ್ಮಹತ್ಯೆ – ನಿನ್ನೆ ನಾಮಪತ್ರ – ಇಂದು ಆತ್ಮಹತ್ಯೆ

Suddi Sante Desk

ಗದಗ –

ನಿನ್ನೆಯಷ್ಟೇ ಗ್ರಾಮ ಪಂಚಾಯತಗೆ ನಾಮಪತ್ರ ಸಲ್ಲಿಸಿ ಮುಂದಿನ ಸಿದ್ದತೆಯನ್ನು ಮಾಡಿಕೊಳ್ಳಬೇಕಾದ ಅಭ್ಯರ್ಥಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗದಗ ನಲ್ಲಿ ನಡೆದಿದೆ.ಹೌದು ಗ್ರಾಮ ಪಂಚಾಯತಿಗೆ ಸ್ಪರ್ಧೆ ಮಾಡಿದ್ದ ಚುನಾವಣಾ ಅಭ್ಯರ್ಥಿಯೊರ್ವ ಆತ್ಮಹತ್ಯೆಗೆ ಶರಣಾಗಿದ್ದಾರೆ.

ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಗ್ರಾಮದಲ್ಲಿ ಈ ಒಂದು ಘಟನೆ ನಡೆದಿದೆ.ವಿಜಯ ಕುಮಾರ್ ಭಜಂತ್ರಿ (46) ಆತ್ಮಹತ್ಯೆ ಮಾಡಿಕೊಂಡ ಅಭ್ಯರ್ಥಿಯಾಗಿದ್ದಾನೆ.

ನಿನ್ನೆ ಹಮ್ಮಿಗಿ ಗ್ರಾಮ ಪಂಚಾಯತ್ ನಲ್ಲಿ ನಾಮಪತ್ರ ಸಲ್ಲಿಸಿದ್ದ ವಿಜಯ ಕುಮಾರ್ ಇಂದು ಜಮೀನಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಅತಿಯಾದ ಸಾಲಬಾಧೆಯಿಂದ ಆತ್ಮಹತ್ಯೆ ಎಂದು ದೂರು ದಾಖಲಾಗಿದೆ. ಸುದ್ದಿ ತಿಳಿದ ಮುಂಡರಗಿ ಪೊಲೀಸರು ಸ್ಥಳಕ್ಕೇ ಭೇಟಿ ನೀಡಿ ಪರಿಶೀಲನೆ ಮಾಡಿದರು. ಮುಂಡರಗಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು. ಬ್ಯಾಂಕ್ ಹಾಗೂ ಖಾಸಗಿ ಫೈನಾನ್ಸ್‌ನಲ್ಲಿ ಸುಮಾರು 8 ಲಕ್ಷ ರೂಪಾಯಿ ಸಾಲ ಮಾಡಿಕೊಂಡಿದ್ದನಂತೆ ವಿಜಯ ಕುಮಾರ್.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.