ACB ಬಲೆಗೆ ಬಿದ್ದ ಗ್ರಾಮ ಪಂಚಾಯತ ಅಧ್ಯಕ್ಷೆ – ಕಾಮಗಾರಿ ಯ ಬಿಲ್ ಬಿಡುಗಡೆಗೆ ಹಣಕ್ಕೆ ಬೇಡಿಕ್ಕೆ ಇಟ್ಟಿದ್ದ ಅಧ್ಯಕ್ಷೆ ಬಲೆಗೆ…..

Suddi Sante Desk

ಶಿವಮೊಗ್ಗ –

ಮುಕ್ತಾಯಗೊಂಡ ಕಾಮಗಾರಿಯ ಬಿಲ್ ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಗ್ರಾಮ ಪಂಚಾಯತ ಅಧ್ಯಕ್ಷೆಯೊಬ್ಬರು ಎಸಿಬಿ ಬಲೆಗೆ ಬಿದ್ದ ಘಟನೆ ಶಿವಮೊಗ್ಗ ದಲ್ಲಿ ನಡೆದಿದೆ.ಹೌದು ಶಿವಮೊಗ್ಗ ತಾಲ್ಲೂಕಿನ ಮುದ್ದಿನ ಕೊಪ್ಪ ಗ್ರಾಮ ಪಂಚಾಯತ ಅಧ್ಯಕ್ಷೆ ವಾಣಿ ದಂಡಿಪಾನಿ ಅವರೇ ಎಸಿಬಿ ಬಲೆಗೆ ಬಿದ್ದವರಾಗಿದ್ದಾರೆ.ಗುತ್ತಿಗೆದಾರ ಲೊಕೇಶ್ ಎಂಬುವರು ಕಾಮಗಾರಿಯೊಂದನ್ನು ಮುಕ್ತಾಯ ಮಾಡಿದ್ದರು.

ಈ ಒಂದು ಕಾಮಗಾರಿಯ ಬಿಲ್ ಬಿಡುಗಡೆ ಮಾಡಲು 50 ಸಾವಿರ ರೂಪಾಯಿ ಬೇಡಿಕೆ ಇಟ್ಟಿದ್ದರು. ಈ ಕುರಿತಂತೆ ಗುತ್ತಿಗೆದಾರ ಎಸಿಬಿ ಅವರಿಗೆ ದೂರನ್ನು ನೀಡಿದರು. ದೂರಿನ ಹಿನ್ನಲೆಯಲ್ಲಿ ಕಾರ್ಯಾಚರಣೆ ಮಾಡಿದ ಎಸಿಬಿ ಅಧಿಕಾರಿಗಳು ಎಸ್ಪಿ ಜಯಪ್ರಕಾಶ್ ಮಾರ್ಗದರ್ಶನದಲ್ಲಿ ದಾಳಿ ಮಾಡಿ ಗ್ರಾಮ ಪಂಚಾಯತ ಅಧ್ಯಕ್ಷೆಯನ್ನು ವಶಕ್ಕೆ ತಗೆದುಕೊಂಡಿದ್ದಾರೆ.

ಇಂದು 25 ಸಾವಿರ ರೂಪಾಯಿ ತಗೆದುಕೊಳ್ಳುವಾಗ ರೇಂಡ್ ಹ್ಯಾಂಡ್ ಆಗಿ ಟ್ರ್ಯಾಪ್ ಮಾಡಿದ್ದಾರೆ. ಸಧ್ಯ ವಶಕ್ಕೆ ತಗೆದುಕೊಂಡಿರುವ ಎಸಿಬಿ ಅಧಿಕಾರಿಗಳು ಮುಂದಿನ ಕಾರ್ಯವನ್ನು ಮಾಡತಾ ಇದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.