ಉಳ್ಳಾಲ –
ಗ್ರಾಮ ಪಂಚಾಯತ್ ಅಧ್ಯಕ್ಷೆ ಅಧಿಕಾರ ಸ್ವೀಕರಿಸಿದ ಕೆಲವೇ ಗಂಟೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಅಂಬ್ಲ ಮೊಗರಿನಲ್ಲಿ ನಡೆದಿದೆ. ಶುಕ್ರವಾರ ಮಧ್ಯಾಹ್ನ ವೇಳೆ ಅಂಬ್ಲಮೊಗರು ಗ್ರಾಮ ಪಂಚಾಯತ್ ನಲ್ಲಿ ಅಧ್ಯಕ್ಷರಾಗಿ ಕಾಂಗ್ರೆಸ್ ಬೆಂಬಲಿತ ಲತಾ ಪರಮೇಶ್ವರ್ ಹಾಗೂ ಉಪಾಧ್ಯಕ್ಷರಾಗಿ ಮಹಮ್ಮದ್ ಇಕ್ಬಾಲ್ ಅಧಿಕಾರ ವಹಿಸಿಕೊಂಡಿದ್ದರು.

ತುಂಬು ಗರ್ಭಿಣಿಯಾಗಿದ್ದ ಲತಾ ಪರಮೇಶ್ವರ್ ಅವರಿಗೆ ವೈದ್ಯರು ಫೆ.20 ಕ್ಕೆ ಪ್ರಸವದ ದಿನಾಂಕ ಹೇಳಿದ್ದರು. ಆದರೆ ಅಧಿಕಾರ ವಹಿಸಿದ ಬೆನ್ನಲ್ಲೇ ಲತಾ ಅವರಿಗೆ ಪ್ರಸವದ ನೋವು ಕಾಣಿಸಿಕೊಂಡಿತು ಆಸ್ಪತ್ರೆಗೆ ದಾಖಲಾಗಿದ್ದರು ನಂತರ ಹೆರಿಗೆಯಾಗಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ ಸಧ್ಯ ಆಸ್ಪತ್ರೆಯಲ್ಲಿ ತಾಯಿ ಮತ್ತು ಆರೋಗ್ಯವಾಗಿದ್ದಾರೆ.