ಚಾಮರಾಜನಗರ –
ಮಹಾಮಾರಿ ಕೊರೊನಾಗೆ ರಾಜ್ಯದಲ್ಲಿ ಮತ್ತೊರ್ವ ಗ್ರಾಮ ಪಂಚಾಯಿತಿ ಅಧ್ಯಕ್ಷ ಬಲಿಯಾದ ಘಟನೆ ಚಾಮರಾಜನಗರ ದಲ್ಲಿ ನಡೆದಿದೆ.ಕೊಳ್ಳೇಗಾಲ ತಾಲೂಕಿನ ಕುಂತೂರು ಗ್ರಾಮ ಪಂಚಾಯಿತಿ ಅಧ್ಯಕ್ಷ ಮಹದೇವ ಪ್ರಸಾದ್ (44) ಸಾವಿಗೀಡಾದ ವ್ಯಕ್ತಿಯಾಗಿದ್ದಾರೆ
ಕಳೆದ 5 ದಿನಗಳ ಹಿಂದೆಯಷ್ಟೇ ಉಸಿರಾಟ ತೊಂದ ರೆಯಿಂದ ಚಾಮರಾಜನಗರ ಜಿಲ್ಲಾ ಕೋವಿಡ್ ಆಸ್ಪ ತ್ರೆಗೆ ದಾಖಲಾಗಿದ್ದರು.ಚಿಕಿತ್ಸೆ ಫಲಿಸದೆ ಸಾವಿಗೀಡಾ ಗಿದ್ದು ಮಹದೇವಪ್ರಸಾದ್ ಅವರಿಗೆ ಕೊರೊನಾ ಸೋಂಕು ದೃಢಪಟ್ಟಿತ್ತು.ಕಳೆದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಆಯ್ಕೆಯಾಗಿ, 3 ತಿಂಗಳಿನಿಂದ ಗ್ರಾಪಂ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದರು.