ಬೆಂಗಳೂರು –
ಹೌದು ಹೈಕೋರ್ಟ್ ಆದೇಶದ ಬೆನ್ನಲ್ಲೇ ಎಸಿಬಿ ಯನ್ನು ರದ್ದುಗೊಳಿಸಿರುವ ರಾಜ್ಯ ಸರಕಾರ ಲೋಕಾಯುಕ್ತ ಸಂಸ್ಥೆಯನ್ನು ಬಲಗೊಳಿಸಲು ತೀರ್ಮಾನಿಸಿದ್ದು ಸಧ್ಯ ಅಗತ್ಯ ಸೌಲಭ್ಯ ಹಾಗೂ ಸಿಬ್ಬಂದಿ ಗಳನ್ನು ಒದಗಿಸಲು ನಿರ್ಧರಿಸಿ ತೀರ್ಮಾನ ವನ್ನು ಕೈಗೊಳ್ಳಲಾಗಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದ್ದು ಲೋಕಾಯುಕ್ತರಿಗೆ ರಾಜ್ಯ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಗೆ ಸಮಾನವಾದ ವೇತನ ಹಾಗೂ ಭತ್ತೆ, ಸೌಲಭ್ಯಗಳನ್ನು ಒದಗಿಸುವ ಬಗ್ಗೆ ತೀರ್ಮಾನ ಕೈಗೊಳ್ಳ ಲಾಗಿದೆ.
ಅಲ್ಲದೆ ಲೋಕಾಯುಕ್ತ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ,ಜಿಲ್ಲಾ ಕೇಂದ್ರಗಳಲ್ಲಿ ಲೋಕಾಯುಕ್ತ ಕಚೇರಿಗಳಿಗೆ ಅಗತ್ಯ ಮೂಲ ಸೌಕರ್ಯ ಒದಗಿಸಲು ಸಂಪುಟದಲ್ಲಿ ನಿರ್ಧರಿಸಲಾಗಿದೆ.
ಕರ್ನಾಟಕ ಲೋಕಾಯುಕ್ತ ಸಂಸ್ಥೆಯಲ್ಲಿ ಅಪರ ನಿಬಂಧ ಕರು(ವಿಚಾರಣೆಗಳು)ಹುದ್ದೆಯಲ್ಲಿ ಗುತ್ತಿಗೆ ಕಾರ್ಯನಿರ್ವಹಿ ಸುತ್ತಿರುವ ಲೆಕ್ಕದಪ್ಪ ಜಂಬಗಿ ಇವರ ಸೇವೆಯನ್ನು ಮಾರ್ಚ್ 26ರಿಂದ ಒಂದು ವರ್ಷದ ಅವಧಿಗೆ ಮುಂದುವರಿಸುವುದು ಹಾಗೂ ನಿವೃತ್ತ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶ ಪ್ರಕಾಶ ನಾಡಿಗೇರ ಅವರನ್ನು ಖಾಲಿಯಿರುವ ಅವರ ನಿಬಂಧಕರು(ವಿಚಾರಣೆಗಳು) ಹುದ್ದೆಯಲ್ಲಿ ಒಂದು ವರ್ಷದ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಿಸಲು ಸಂಪುಟ ಒಪ್ಪಿಗೆ ನೀಡಿದೆ.