ರಾಜ್ಯದಲ್ಲಿ LKG,UKG ಆರಂಭಕ್ಕೆ ಗ್ರೀನ್ ಸಿಗ್ನಲ್ – ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭ ಮಾಡಲು ರಾಜ್ಯ ಸರ್ಕಾರ ಗ್ರೀನ್ ಸಿಗ್ನಲ್ –

Suddi Sante Desk

ಬೆಂಗಳೂರು –

ಈಗಾಗಲೇ ಹಂತ ಹಂತವಾಗಿ ರಾಜ್ಯದಲ್ಲಿ ಶಾಲೆಗಳನ್ನು ಆರಂಭ ಮಾಡಿದ ಬೆನ್ನಲ್ಲೇ ಈಗ LKG,UKG ಆರಂಭಕ್ಕೂ ಗ್ರೀನ್ ಸಿಗ್ನಲ್ ನೀಡಲಾಗಿದೆ.ಹೌದು ಪ್ರಾಥಮಿಕ ಪ್ರೌಢ ಶಾಲೆ ಸೇರಿದಂತೆ ಎಲ್ಲಾ ಶಾಲೆ ಕಾಲೇಜುಗಳನ್ನು ಪೂರ್ಣ ಪ್ರಮಾಣದಲ್ಲಿ ಆರಂಭಿಸಲು ಸರ್ಕಾರ ಹಸಿರು ನಿಶಾನೆ ತೋರಿದೆ.ನವೆಂಬರ್ 8 ರಿಂದ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭಿಸಲು ಸೂಚಿಸಲಾಗಿದೆ.ಅಂದಿನಿಂದಲೇ ಪೂರ್ವ ಪ್ರಾಥಮಿಕ ತರಗತಿಗಳಾದ ಯುಕೆಜಿ ಮತ್ತು ಎಲ್ ಕೆಜಿ ಶಾಲೆಗಳನ್ನು ತೆರೆಯಲು ಸರ್ಕಾರ ಸೂಚನೆ ನೀಡಿದೆ.

ಈ ಬಗ್ಗೆ ಸರ್ಕಾರ ಆದೇಶವನ್ನು ಹೊರಡಿಸಿದ್ದು ಎಲ್ ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಸೋಮವಾರದಿಂದ ಶುಕ್ರವಾರದವರೆಗೆ ತೆರೆಯಬೇಕು.ಬೆಳಗ್ಗೆ 9.30ರಿಂದ ಮಧ್ಯಾಹ್ನ 3.30 ರವೆರೆಗೆ ತರಗತಿ ನಡೆಸಲು ಸೂಚಿಸಿ ಮಾರ್ಗಸೂಚಿ ಗಳನ್ನು ಅನ್ವಯಿಸುವಂತೆ ಆದೇಶವನ್ನು ಹೊರಡಿಸಲಾಗಿದೆ

ಕೋವಿಡ್ 19 ಸೋಂಕಿನ ಪ್ರಮಾಣ 2%ಕ್ಕಿಂತ ಕಡಿಮೆ ಇರುವ ತಾಲೂಕುಗಳಲ್ಲಿ ಮಾತ್ರ ಇದು ಅನ್ವಯವಾಗುತ್ತದೆ‌ ಪೂರ್ವ ಪ್ರಾಥಮಿಕ ಮಕ್ಕಳಿಗೆ ಮನೆಯಿಂದಲೇ ಉಪಹಾರ ಮತ್ತು ಕುಡಿಯುವ ನೀರನ್ನು ಕಳುಹಿಸುವಂತೆ ಎಲ್ಲಾ ಪೋಷಕರಿಗೆ ತಿಳಿಸಬೇಕು ಎಂದು ಸೂಚಿಸಲಾಗಿದೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.