ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ
ಆಗಸ್ಟ್ 11 ರಿಂದ 17 ರವರೆಗೆ ಜಿಲ್ಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನ; ಸಾರ್ವಜನಿಕರು ಸಕ್ರೀಯವಾಗಿ ಭಾಗವಹಿಸಲು ಜಿಲ್ಲಾಧಿಕಾರಿ ಮನವಿ…..

Suddi Sante Desk

ಧಾರವಾಡ –

ದೇಶದಾದ್ಯಂತ ಭಾರತ ಸ್ವಾತಂತ್ರ್ಯದ 75 ರ ಸಂಭ್ರಮವನ್ನು ವೈವಿಧ್ಯಮಯವಾಗಿ ಆಚರಿಸಲಾಗುತ್ತದೆ.ಈ ಸಂಭ್ರಮದ ಒಂದು ಭಾಗವಾಗಿ ಕೇಂದ್ರ ಸರ್ಕಾರವು ಹರ್ ಘರ್ ತಿರಂಗಾ ಎಂಬ ಘೋಷವಾಕ್ಯದೊಂದಿಗೆ ಆಗಸ್ಟ್ 11 ರಿಂದ 17 ರವರೆಗೆ ದೇಶದ ಪ್ರತಿ ಮನೆ-ಮನೆಯಲ್ಲೂ ರಾಷ್ಟ್ರ ಧ್ವಜವನ್ನು ಹಾರಿಸಿ ದೇಶಭಕ್ತಿಯನ್ನು ಅಭಿವ್ಯಕ್ತಗೊಳಿಸಲು ಹರ್ ಘರ್ ತಿರಂಗಾ ಅಭಿಯಾನವನ್ನು ಆಯೋಜಿಸಿದ್ದು ಜಿಲ್ಲೆಯ ಎಲ್ಲ ನಾಗರಿಕರು ಈ ಅಭಿಯಾನದಲ್ಲಿ ಸಕ್ರೀಯ ವಾಗಿ ಭಾಗವಹಿಸಬೇಕೆಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.ಬೆಳಿಗ್ಗೆ ಕಚೇರಿ ಸಭಾಂಗಣದಲ್ಲಿ ಹರ್ ಘರ್ ತಿರಂಗಾ ಅಭಿಯಾನದ ಪೂರ್ವಭಾವಿ ಸಭೆ ಜರುಗಿಸಿ ಮಾತನಾಡಿದರು.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಆಗಸ್ಟ್ 11 ರಿಂದ 17 ರವರೆಗೆ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಅಭಿಯಾನದಲ್ಲಿ ರಾಜ್ಯ ಸರ್ಕಾರದ ಸರ್ಕಾರಿ ಅರೆ ಸರ್ಕಾರಿ,ನಿಗಮ ಮಂಡಳಿ,ಸಾರ್ವಜನಿಕ ಉದ್ಯಮಗಳು, ಸ್ವಸಹಾಯ ಗುಂಪುಗಳು,ನಾಗರಿಕ ಸಂಸ್ಥೆಗಳು,ಶಾಲಾ ಕಾಲೇಜು ವಿದ್ಯಾರ್ಥಿಗಳು,ಇತರೆ ಎಲ್ಲ ಸಿಬ್ಬಂದಿಗಳು ಮತ್ತು ಸಾರ್ವಜನಿಕರು ಅವರ ಕುಟುಂಬ ವರ್ಗದವರು ಸೇರಿ ದಂತೆ ಎಲ್ಲರೂ ಸ್ವಯಂ ಪ್ರೇರಿತವಾಗಿ ಭಾಗವಹಿಸಬೇಕು. ಆ ಮೂಲಕ ತಮ್ಮ ರಾಷ್ಟ್ರ ಪ್ರೇಮವನ್ನು ಮೆರೆಯಬೇ ಕೆಂದು ಅವರು ಹೇಳಿದರು.

ಗೃಹ ವ್ಯವಹಾರಗಳ ಮಂತ್ರಾಲಯವು ಧ್ವಜ ಸಂಹಿತೆ ಕಾಯ್ದೆಗೆ ತಿದ್ದುಪಡಿ ತಂದಿದ್ದು ಕೈಯಲ್ಲಿ ತಯಾರಿಸಿದ ರಾಷ್ಟ್ರೀಯ ಧ್ವಜ ಅಥವಾ ಯಂತ್ರದಿಂದ ತಯಾರಿಸಿದ ಪಾಲಿಸ್ಟರ್,ಹತ್ತಿ, ಉಣ್ಣೆ,ರೇಷ್ಮೆ,ಖಾದಿಬಟ್ಟೆಯಿಂದ ತಯಾ ರಿಸುವ ರಾಷ್ಟ್ರೀಯ ಧ್ವಜವನ್ನು ಹಾರಿಸಬಹುದಾಗಿದೆ. ರಾಷ್ಟ್ರೀಯ ಧ್ವಜದ ಅಳತೆಯು 20×30 ಅಥವಾ ಈ ಅಳತೆಯ ಅರ್ಧದಷ್ಟು ಸಹ ಆಗಿರಬಹುದೆಂದು ಕೇಂದ್ರ ಸರ್ಕಾರದ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

ಹರ್ ಘರ್ ತಿರಂಗಾ ಅಭಿಯಾನವನ್ನು ಪರಿಣಾಮಕಾರಿ ಯಾಗಿ ಹಮ್ಮಿಕೊಳ್ಳಲು ಕಾರ್ಯಕ್ರಮ ರೂಪಿಸಿದ್ದು ತಮ್ಮ ತಮ್ಮ ಮನೆಯ ಮೇಲೆ ಅಥವಾ ಮನೆಯ ಅಂಗಳದಲ್ಲಿ ಕುಟುಂಬದೊಂದಿಗೆ ರಾಷ್ಟ್ರಧ್ವಜಾರೋಹಣ ಮಾಡುವಂತೆ ಪೋಷಕರಿಗೆ ತಿಳಿಸಲು ಎಲ್ಲ ಸರ್ಕಾರಿ,ಅನುದಾನಿತ ಮತ್ತು ಅನುದಾನರಹಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ಮಕ್ಕ ಳಲ್ಲಿ ಅರಿವು ಮೂಡಿಸಲು ಪ್ರತಿದಿನ ಬೆಳಿಗ್ಗೆ ಜರುಗುವ ಪ್ರಾಥನಾ ಸಮಯದಲ್ಲಿ ಶಾಲಾ ಕಾಲೇಜುಗಳಿಂದ ಧ್ವಜಾ ರೋಹಣದ ಮಹತ್ವ ತಿಳಿಸಲು ಕ್ರಮವಹಿಸಬೇಕೆಂದು ಅವರು ತಿಳಿಸಿದರು.

ಗ್ರಾಮೀಣ ಭಾಗದ ಸ್ಥಳೀಯ ಸಂಸ್ಥೆಗಳಾದ ಪಂಚಾಯತ ರಾಜ್ ಸಂಸ್ಥೆಗಳು ಸ್ವಸಹಾಯ ಸಂಘಗಳು,ಒಕ್ಕೂಟ ಗಳು, ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಆರೋಗ್ಯ ಕೇಂದ್ರಗಳು,ಉಪಕೇಂದ್ರ,ಸಹಕಾರ ಸಂಘಗಳು ಉಪ ಅಂಚೆ ಕಚೇರಿಗಳಲ್ಲಿ, ಆಶಾ ಕಾರ್ಯಕರ್ತೆಯರು, ಅಂಗನ ವಾಡಿ ಕಾರ್ಯಕರ್ತೆಯರು,ಗ್ರಾಮ ರೋಜಗಾರ್ ಸೇವಕರು ಶಿಕ್ಷಕರು ಸಾರ್ವಜನಿಕರನ್ನು ಉತ್ತೇಜಿಸಿ ಅಭಿ ಯಾನದಲ್ಲಿ ಎಲ್ಲರೂ ಸಕ್ರೀಯವಾಗಿ ಭಾಗವಹಿಸುವಂತೆ ಕ್ರಮವಹಿಸಬೇಕು.

ರಾಷ್ಟ್ರ ಧ್ವಜಗಳ ಹಂಚಿಕೆ ಮತ್ತು ಮಾರಾಟ ಮಾಡುವ ಸ್ಥಳಗಳನ್ನು ಗ್ರಾಮ ಮಟ್ಟದಲ್ಲಿ ಗ್ರಾಮ ಪಂಚಾಯತ ಮತ್ತು ನಗರ ಪ್ರದೇಶಗಳಲ್ಲಿ ನಗರ ಸ್ಥಳೀಯ ಸಂಸ್ಥೆಗಳು ಗುರುತಿಸಬೇಕು. ನ್ಯಾಯಬೆಲೆ ಅಂಗಡಿಗಳನ್ನು ಸಹ ಧ್ವಜಗಳ ವಿತರಣೆ,ಮಾರಾಟದ ಕೇಂದ್ರವಾಗಿ ಉಪಯೋಗಿ ಸಿಕೊಳ್ಳಬಹುದು.ಎಲ್ಲ ಸರ್ಕಾರಿ ಕಚೇರಿ ಹಾಗೂ ಶಾಲಾ ಕಾಲೇಜುಗಳು ಹರ್ ಘರ್ ತಿರಂಗಾ ಅಭಿಯಾನ ಕುರಿತು ಕೈಗೊಂಡ ಕ್ರಮದ ಬಗ್ಗೆ ಛಾಯಾಚಿತ್ರ ಸಹಿತ ಅನುಪಾ ಲನಾ ವರದಿಯನ್ನು ಜಿಲ್ಲಾಧಿಕಾರಿಗಳ ಕಚೇರಿಗೆ ಸಲ್ಲಿಸ ಬೇಕೆಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

ಜಿಲ್ಲೆಯಲ್ಲಿ ಹರ್ ಘರ್ ತಿರಂಗಾ ಅಭಿಯಾನವನ್ನು ಯಶಸ್ವಿಯಾಗಿ ಆಯೋಜಿಸಲು ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕ ಡಾ.ಎನ್.ಆರ್ ಪುರು ಷೋತ್ತಮ ಅವರನ್ನು ಜಿಲ್ಲಾ ಮಟ್ಟದ ನೋಡಲ್ ಅಧಿಕಾರಿ ಯಾಗಿ ಮತ್ತು ಪ್ರಾದೇಶಿಕ ಪತ್ರಗಾರ ಇಲಾಖೆಯ ಹಿರಿಯ ಸಹಾಯಕ ನಿರ್ದೇಶಕಿ ಮಂಜುಳಾ ಎಲಿಗಾರ ಅವರನ್ನು ನೇಮಿಸಲಾಗಿದೆ ಎಂದು ತಿಳಿಸಿದರು.

ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶಿವಾನಂದ ಭಜಂತ್ರಿ, ಜಿಲ್ಲಾ ಪಂಚಾಯತ ಯೋಜನಾ ನಿರ್ದೇಶಕ ಬಿ.ಎಸ್ ಮುಗನೂರಮಠ,ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಪ್ರಕಾಶ ಸರಶೆಟ್ಟಿ, ಮಹಾನಗರ ಪಾಲಿಕೆಯ ಉಪ ಆಯುಕ್ತ ಆನಂದ ಕಲ್ಲೋಳಕರ,ನೋಡಲ್ ಅಧಿಕಾರಿ ಡಾ.ಎನ್.ಆರ್. ಪುರುಷೋತ್ತಮ,ಮಂಜುಳಾ ಎಲಿಗಾರ, ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ನೆಹರು ಯುವ ಕೇಂದ್ರದ ಯುವ ಅಧಿಕಾರಿ ಗೌತಮರೆಡ್ಡಿ ಸೇರಿದಂತೆ ಇತರರು ಭಾಗವಹಿಸಿದ್ದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.