This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

State News

10ನೇ ಕ್ಲಾಸ್ ಪಾಸಾಗಿದ್ದೀರಾ….. ಹಾಗಾದ್ರೆ ಈ ಉದ್ಯೋಗಕ್ಕೆ ಅರ್ಜಿ ಹಾಕಿ, 63 ಸಾವಿರ ಸಂಬಳ ಕೊಡ್ತಾರೆ…..

WhatsApp Group Join Now
Telegram Group Join Now

ಬೆಂಗಳೂರು

10ನೇ ಕ್ಲಾಸ್ ಪಾಸಾಗಿದ್ದೀರಾ….. ಹಾಗಾದ್ರೆ ಈ ಉದ್ಯೋಗಕ್ಕೆ ಅರ್ಜಿ ಹಾಕಿ, 63 ಸಾವಿರ ಸಂಬಳ ಕೊಡ್ತಾರೆ….ಹೌದು ಭಾರತೀಯ ಅಂಚೆ ಇಲಾಖೆ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 11 ಸ್ಟಾಫ್ ಕಾರ್​ ಡ್ರೈವರ್ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು.

ನವೆಂಬರ್ 24, 2023 ಅಂದರೆ ನಾಳೆ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ . ಆಸಕ್ತರು ಆಫ್​ಲೈನ್​/ ಪೋಸ್ಟ್​ ಮೂಲಕ ಅರ್ಜಿ ಹಾಕ ಬೇಕು.ಕೇಂದ್ರ ಸರ್ಕಾರದ ಉದ್ಯೋಗ ಹುಡು ಕುತ್ತಿರುವವರು ಈ ಅವಕಾಶವನ್ನು ಸದುಪ ಯೋಗಪಡಿಸಿಕೊಳ್ಳಿ. ಬೇಗನೆ ಅರ್ಜಿ ಹಾಕಿ ಪೋಸ್ಟ್ ಆಫೀಸ್ ಉದ್ಯೋಗ ಪಡೆದುಕೊಳ್ಳಿ.

ವಿದ್ಯಾರ್ಹತೆ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿ ಯಿಂದ ಕಡ್ಡಾಯವಾಗಿ 10ನೇ ತರಗತಿ ಪಾಸಾಗಿ ರಬೇಕು.

ವಯೋಮಿತಿ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 24, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 27 ವರ್ಷ ಮೀರಿರಬಾರದು.

ವಯೋಮಿತಿ ಸಡಿಲಿಕೆ:
ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ಮತ್ತು SC/ST ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.

ವೇತನ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ ₹19,900-63,200 ಸಂಬಳ ಕೊಡಲಾಗುತ್ತದೆ.

ಅರ್ಜಿ ಶುಲ್ಕ:
SC/ST/ESM ಮತ್ತು ಮಹಿಳಾ ಅಭ್ಯರ್ಥಿಗಳು: ಅರ್ಜಿ ಶುಲ್ಕ ಇಲ್ಲ ಎಲ್ಲಾ ಇತರೆ ಅಭ್ಯರ್ಥಿಗಳು: ರೂ.100/-ಪಾವತಿ ವಿಧಾನ: ಭಾರತೀಯ ಪೋಸ್ಟಲ್ ಆರ್ಡರ್

ಉದ್ಯೋಗದ ಸ್ಥಳ:
ಭಾರತೀಯ ಅಂಚೆ ಇಲಾಖೆ ನೇಮಕಾತಿ ಅಧಿಸೂಚನೆ ಪ್ರಕಾರ, ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಧ್ಯಪ್ರದೇಶದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ.

ಆಯ್ಕೆ ಪ್ರಕ್ರಿಯೆ:
ಡ್ರೈವಿಂಗ್ ಲೈಸೆನ್ಸ್​
ಡ್ರೈವಿಂಗ್ ಟೆಸ್ಟ್
ಟ್ರೇಡ್ ಟೆಸ್ಟ್
ಥಿಯರಿ ಟೆಸ್ಟ್​
ಪ್ರಾಕ್ಟಿಕಲ್ ಟೆಸ್ಟ್​

ಅರ್ಜಿ ಸಲ್ಲಿಸಲು ಕೊನೆಯ ದಿನ: ನವೆಂಬರ್ 24, 2023(ನಾಳೆ)

ಅರ್ಜಿ ಹಾಕೋದು ಹೇಗೆ?
ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
ಅಸಿಸ್ಟೆಂಟ್ ಡೈರೆಕ್ಟರ್ (Estt/Rectt)
O/o ಮುಖ್ಯ ಪೋಸ್ಟ್‌ಮಾಸ್ಟರ್ ಜನರಲ್
M.P. ವೃತ್ತ
ಭೋಪಾಲ್-462027.

ಸುದ್ದಿ ಸಂತೆ ನ್ಯೂಸ್ ಡೆಸ್ಕ್…..


Google News

 

 

WhatsApp Group Join Now
Telegram Group Join Now
Suddi Sante Desk