ಬೆಂಗಳೂರು –
ಜೆಡಿಎಸ್ ತೊರೆದು ಬಿಜೆಪಿ ಸೇರಿರುವ ಮಾಜಿ ಸಭಾಪತಿ ಬಸವರಾಜ ಹೊರಟ್ಟಿ ಪ್ರತಿನಿಧಿಸುತ್ತಿದ್ದ ಪಶ್ಚಿಮ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಶ್ರೀಶೈಲ ನಿಂಗಪ್ಪ ಗಡದಿನ್ನಿ ಅವರನ್ನು ಘೋಷಣೆ ಮಾಡಲಾಗಿದೆ.ಹೌದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಇವರನ್ನು ಅಭ್ಯ ರ್ಥಿಯಾಗಿ ಘೋಷಣೆ ಮಾಡಿದ್ದಾರೆ.
ಪಶ್ಚಿಮ ಶಿಕ್ಷಕರ ಮತ ಕ್ಷೇತ್ರದಿಂದ ಶ್ರೀಶೈಲ ನಿಂಗಪ್ಪ ಗಡದಿನ್ನಿ ಹಾಗೂ ವಾಯುವ್ಯ ಶಿಕ್ಷಕರ ಮತ ಕ್ಷೇತ್ರದಿಂದ ಚಂದ್ರಶೇಖರ ಲೋಣಿ ಅವರನ್ನು ಜೆಡಿಎಸ್ ಪಕ್ಷದ ಅಭ್ಯರ್ಥಿಗಳಾಗಿ ಘೋಷಣೆ ಮಾಡಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ ಮೂಲಕ ಖಚಿತ ಪಡಿಸಿದ್ದಾರೆ.