ಧಾರವಾಡ –
ಕೆಲ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಮಾಜಿ ಸಚಿವ ಬಸವರಾಜ ಹೊರಟ್ಟಿ ಇಂದಿನಿಂದ ಉಪವಾಸ ಸತ್ಯಾಗ್ರಹ ಆರಂಭಿಸಿದ್ದಾರೆ. ಧಾರವಾಡ ಜಿಲ್ಲಾಧಿಕಾರಿ ಕಚೇರಿ ಮುಂದೆ ಇಂದಿನಿಂದ ಹೋರಾಟ ಆರಂಭ ಮಾಡಿದ್ದಾರೆ. ಪ್ರಮುಖವಾಗಿ ಹಲವಾರು ಶಿಕ್ಷಕರ ,ಶಿಕ್ಷಣ ಕ್ಷೇತ್ರದಲ್ಲಿನ ಬೇಡಿಕೆಗಳನ್ನು ಈಡೇರಿಕೆಗೆ ಹೋರಾಟ ಆರಂಭ ಮಾಡಿದ್ದಾರೆ.
ಇತ್ತ ಬಸವರಾಜ ಹೊರಟ್ಟಿಯವರ ಹೋರಾಟ ಆರಂಭವಾಗುತ್ತಿದ್ದಂತೆ ಅತ್ತ ರಾಜ್ಯ ಸರ್ಕಾರ ಇವರ ಬೇಡಿಕೆಗಳಲ್ಲಿ ಒಂದನ್ನು ಈಡೇರಿಸಿದೆ. ಬಸವರಾಜ ಹೊರಟ್ಟಿ ಅವರು ಶಿಕ್ಷಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಂತೆ ಎಚ್ಚೆತ್ತುಕೊಂಡ ರಾಜ್ಯ ಸರ್ಕಾರ ಧಾರವಾಡದಲ್ಲಿ ಕಳೆದ ಹಲವಾರು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯ
ಬೋಧಕೇತರ ಸಿಬ್ಬಂದಿಗಳ 2020-21 ನೇ ಸಾಲಿನ ವೇತನವನ್ನು ಸರ್ಕಾರವು ತಡೆಹಿಡಿದಿದ್ದನ್ನು ಸರ್ಕಾರವು ಇಂದು ಬಿಡುಗಡೆ ಮಾಡಿ ಆದೇಶವನ್ನು ಹೊರಡಿಸಿದೆ.