ಭಾಲ್ಕಿ –
ಮುಖ್ಯ ಶಿಕ್ಷಕರು ತಮ್ಮ ತಮ್ಮ ಶಾಲೆಗಳ ಕಟ್ಟಡ ಸುರಕ್ಷತೆ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು ಎಂದು ಕ್ಷೇತ್ರ ಶಿಕ್ಷಣಾ ಧಿಕಾರಿ ಬಸವಂತರಾಯ ಜಿಡ್ಡೆ ಸೂಚಿಸಿದರು.ಪಟ್ಟಣದ ಕ್ಷೇತ್ರ ಸಂಪನ್ಮೂಲ ಕೇಂದ್ರ (ಬಿಆರ್ ಸಿ)ದಲ್ಲಿ ನಡೆದ ಸರ್ಕಾರಿ ಮತ್ತು ಅನುದಾನಿತ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಭೆಯಲ್ಲಿ ಮಾತನಾಡಿದ ಅವರು ನಮ್ಮ ತಾಲೂಕಿನಲ್ಲಿ ರುವ ಎಲ್ಲ ಶಾಲೆಗಳಲ್ಲಿ ಸುಮಾರು 1,809 ಕೊಠಡಿಗಳಿವೆ ಅವುಗಳಲ್ಲಿ 190 ಕೊಠಡಿಗಳು ಶಿಥಿಲಾವಸ್ಥೆಯಲ್ಲಿವೆ. ಇವು ಗಳ ಬಗ್ಗೆ ಮುಖ್ಯ ಶಿಕ್ಷಕರು ಲಿಖೀತ ಮಾಹಿತಿ ನೀಡಿ ಅನು ದಾನ ಪಡೆದು ಕೊಠಡಿಗಳು ಸುರಕ್ಷಿತವಾಗಿಟ್ಟುಕೊಳ್ಳುವಂತೆ ನೋಡಿಕೊಳ್ಳಬೇಕು ಮಳೆಗಾಲ ಇರುವ ಕಾರಣ ಮುಖ್ಯ ಶಿಕ್ಷಕರು ಸ್ವತ್ಛತೆ ಮತ್ತು ಸುಸ್ಥಿರತೆ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು.ಅಲ್ಲದೇ ಇದುವರೆಗೆ ಕ್ರೀಡಾ ನಿಧಿ ಶಿಕ್ಷಕರ ಕಲ್ಯಾಣ ನಿಧಿ ವಿದ್ಯಾರ್ಥಿಗಳ ಕಲ್ಯಾಣ ನಿಧಿ ಸೇರಿದಂತೆ ಯಾವುದೇ ಸರ್ಕಾರಿ ಶುಲ್ಕ ಪಾವತಿಸದೇ ಇದ್ದಲ್ಲಿ ತಕ್ಷಣ ಶುಲ್ಕ ಪಾವತಿಸಬೇಕು ಎಂದು ತಾಕೀತು ಮಾಡಿದರು.
ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಣೆ ನಿಟ್ಟಿನಲ್ಲಿ ಶಿಕ್ಷಕರ ಕೊರತೆ ನೀಗಿಸುವಂತೆ ಶಾಸಕರ ಮುತುವರ್ಜಿಯ ಮೇರೆಗೆ ಎಲ್ಲ ಪ್ರೌಢಶಾಲೆಗಳಿಗೂ ಸುಮಾರು 42 ಜನ ಅತಿಥಿ ಶಿಕ್ಷಕರನ್ನು ನೇಮಿಸಿಕೊಳ್ಳಲು ಅನುಮತಿ ಪಡೆಯಲಾಗಿದೆ. ಯಾವ ಶಾಲೆಗಳಿಗೆ ಶಿಕ್ಷಕರ ಕೊರತೆ ಇದೆಯೋ ಅಂತಹ ಶಾಲೆ ಮುಖ್ಯ ಶಿಕ್ಷಕರು ತಮ್ಮ ಶಾಲೆ ವಿಷಯವಾರು ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡು ಉತ್ತಮವಾಗಿ ಪಾಠ ಮಾಡಿ ಎಸ್‌ಎಸ್‌ಎಲ್‌ಸಿ ಫಲಿತಾಂಶ ಸುಧಾರಿಸುವ ನಿಟ್ಟಿನಲ್ಲಿ ಕಾರ್ಯ ಮಾಡಬೇಕು ಎಂದು ಹೇಳಿದರು.
ಮುಖ್ಯಶಿಕ್ಷಕರ ಸಂಘದ ತಾಲೂಕು ಅಧ್ಯಕ್ಷ ರಾಜಕುಮಾರ ಜೊಳದಪಕೆ,ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯ ಜೋಷಿ, ಮುಖ್ಯ ಶಿಕ್ಷಕ ಎಂ.ಡಿ.ಹನೀಫ್,ಶ್ರೀಕಾಂತ ಮೂಲಗೆ ರಮೇಶ ಮರೂರಕರ ಇದ್ದರು.ಮುಖ್ಯ ಶಿಕ್ಷಕ ಜಯರಾಜ ದಾಬಶೆಟ್ಟಿ ಸ್ವಾಗತಿಸಿದರು.ಚಂದ್ರಕಾಂತ ಖಂಡಾಳೆ ನಿರೂಪಿಸಿದರು ಅಶೋಕ ಬರ್ಮಾ ವಂದಿಸಿದರು.