ಭೀಕರ ರಸ್ತೆ ಅಫಘಾತಕ್ಕೆ ಮುಖ್ಯಶಿಕ್ಷಕ – ಶಿಕ್ಷಕ ಸಾವು – ರಸ್ತೆಯಲ್ಲಿ ಛಿದ್ರ ಛಿದ್ರವಾಗಿ ಬಿದ್ದ ದೇಹಗಳು – ಮನೆಯತ್ತ ಹೊರಟಿದ್ದ ಶಿಕ್ಷಕರು…..

Suddi Sante Desk

ವಿಜಯಪುರ –

ಭೀಕರ ರಸ್ತೆ ಅಪಘಾತಕ್ಕೆ ಇಬ್ಬರು ಶಿಕ್ಷಕರು ಸಾವಿಗೀಡಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.ಲಾರಿ ಹಾಗೂ ಬೈಕ್ ಮಧ್ಯೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಪರಿಣಾಮವಾಗಿ ಈ ಒಂದು ಅಪಘಾತ ಸಂಭವಿಸಿದೆ.ಬೈಕ್ ನಲ್ಲಿದ್ದ ಇಬ್ಬರು ಸವಾರರಾದ ಶಿಕ್ಷಕರು ಸ್ಥಳದಲ್ಲೇ ಸಾವಿಗೀಡಾಗಿ ದ್ದಾರೆ.

ವಿಜಯಪುರ ‌ತಾಲೂಕಿನ ಬರಟಗಿ ಎಲ್ ಟಿ ಸರ್ಕಾರಿ ಮಾಧ್ಯಮಿಕ ಶಾಲೆಯ ಮುಖ್ಯ ಶಿಕ್ಷಕ ಕೆ ಎಚ್ ಹುದ್ದಾರ (58) ಹಾಗೂ ಸಹ ಶಿಕ್ಷಕ ಸಂಗನಗೌಡ ಪಾಟೀಲ್ ಮೃತರಾಗಿರುವ ಶಿಕ್ಷಕರಾಗಿದ್ದಾರೆ. ವಿಜಯಪುರ ನಗರದ ಹೊರ ಭಾಗದ ರಾಷ್ಟ್ರೀಯ ಹೆದ್ದಾರಿ 50 ರಲ್ಲಿ ಈ ಒಂದು ಭೀಕರವಾದ ಘಟನೆ ನಡೆದಿದೆ.ಅಪಘಾತದ ಬಳಿಕ ಲಾರಿ ಬಿಟ್ಟು ಚಾಲಕ ಪರಾರಿಯಾಗಿದ್ದಾನೆ.

ಸಧ್ಯ ಸ್ಥಳಕ್ಕೆ ಸಂಚಾರಿ ಪೊಲೀಸ್ ಠಾಣೆಯ ಪಿಎಸೈ ಸಂಜಯ ಕಲ್ಲೂರ ಹಾಗೂ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ಮಾಡ್ತಾ ಇದ್ದಾರೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಒಂದು ಪ್ರಕರಣ ನಡೆದಿದ್ದು ಪ್ರಕರಣವನ್ನು ದಾಖಲು ಮಾಡಿಕೊಂಡಿರುವ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ ಇನ್ನೂ ಈ ಒಂದು ಭೀಕರ ಅಪಘಾತದಲ್ಲಿ ಮೃತ ರಾದ ಇಬ್ಬರು ಶಿಕ್ಷಕರ ಸಾವಿಗೆ ನಾಡಿನ ಮೂಲೆ ಮೂಲೆಗಳಿಂದ ಶಿಕ್ಷಕರು ದಿಗ್ಬ್ರಮೆ ವ್ಯಕ್ತಪಡಿಸಿ ಸಂತಾಪವನ್ನು ಸೂಚಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.