ಬೆಂಗಳೂರು –
ಉಕ್ರೇನ್ ನಿಂದ ರಾಜ್ಯಕ್ಕೆ ಬಂದ ವಿದ್ಯಾರ್ಥಿಗಳಿಗೆ ಉಚಿತವಾದ ಶಿಕ್ಷಣವನ್ನು ನೀಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ ಡಿ ಸುಧಾಕರ್ ಹೇಳಿದರು. ಬೆಂಗ ಳೂರಿನಲ್ಲಿ ಮಾತನಾಡಿದ ಅವರು ದೇಶದಲ್ಲೇ ಮೊದಲ ಬಾರಿಗೆ ಸರ್ಕಾರದಿಂದ ಕ್ರಾಂತಿಕಾರಿ ನಿರ್ಧಾರ ಕೈಗೊಳ್ಳಲಾ ಗಿದೆ.ಯುದ್ಧಪೀಡಿತ ಉಕ್ರೇನ್ ನಿಂದ ವಾಪಸಾದ ವೈದ್ಯ ವಿದ್ಯಾರ್ಥಿಗಳಿಗೆ ರಾಜ್ಯದಲ್ಲಿ ಉಚಿತ ಶಿಕ್ಷಣ ನೀಡಲಾಗು ವುದು ಎಂದರು.
ರಾಜ್ಯದ 60 ವೈದ್ಯಕೀಯ ಕಾಲೇಜುಗಳಲ್ಲಿ 700 ವಿದ್ಯಾರ್ಥಿ ಗಳಿಗೆ ಅವಕಾಶ ಕಲ್ಪಿಸಲಾಗುವುದು. ಶಿಕ್ಷಣದ ವಿಧಾನ, ಅಧಿಕೃತ ಮಾನ್ಯತೆ ನಿರ್ಧಾರಕ್ಕೆ ಉನ್ನತ ಸಮಿತಿ ರಚಿಸಲಾ ಗುತ್ತದೆ.ರಷ್ಯಾ -ಉಕ್ರೇನ್ ಯುದ್ಧದಿಂದ ಶೈಕ್ಷಣಿಕ ಭವಿಷ್ಯ ಅತಂತ್ರವಾಗಿರುವ ವಿದ್ಯಾರ್ಥಿಗಳಿಗೆ ಅನುಕೂಲ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ.ಸದ್ಯಕ್ಕೆ ವಿದ್ಯಾರ್ಥಿಗಳನ್ನು ಅಧಿಕೃತ ವಾಗಿ ನೋಂದಣಿ ಮಾಡಿಕೊಳ್ಳುವುದಿಲ್ಲ ಶುಲ್ಕ ವಿಧಿಸದೆ ಉಚಿತವಾಗಿ ವೈದ್ಯಕೀಯ ಕಲಿಕೆ ನೀಡಲಾಗುತ್ತದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ. ಸುಧಾಕರ್ ಹೇಳಿದ್ದಾರೆ.