ಹಾವೇರಿ –
ಕೃಷಿ ಸಚಿವ ಬಿ.ಸಿ. ಪಾಟೀಲ್ ಅವರ ಮನೆಗೆ ಹೋಗಿ ಕೋವಿಡ್ ಲಸಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಹಿರೇಕೆರೂರು ತಾಲೂಕು ಆರೋಗ್ಯಾಧಿಕಾರಿಯನ್ನು ಅಮಾನತು ಮಾಡಲಾಗಿದೆ.
ಆರೋಗ್ಯ ಇಲಾಖೆ ಆಯುಕ್ತ ಕೆ.ವಿ. ತ್ರಿಲೋಕಚಂದ್ರ ಅಮಾನತು ಆದೇಶ ಹೊರಡಿಸಿದ್ದಾರೆ.ಮಾರ್ಚ್ 2 ರಂದು ಹಿರೇಕೆರೂರಿನಲ್ಲಿ ಬಿ.ಸಿ. ಪಾಟೀಲ್ ನಿವಾಸಕ್ಕೆ ತೆರಳಿ ಲಸಿಕೆ ನೀಡಲಾಗಿತ್ತು.ಈ ಬಗ್ಗೆ ಪರ-ವಿರೋಧ ಚರ್ಚೆ ನಡೆದಿತ್ತು.
ಕಡ್ಡಾಯವಾಗಿ ಕೋವಿಡ್ ಲಸಿಕಾ ಕೇಂದ್ರಕ್ಕೆ ಹೋಗಿ ಲಸಿಕೆ ಪಡೆದುಕೊಳ್ಳುವಂತೆ ಸೂಚಿಸಿದರೂ ಕೂಡಾ ಸಚಿವರು ಮನೆಯಲ್ಲಿ ಲಸಿಕೆ ಪಡೆಯುವ ಮೂಲಕ ನಿಯಮ ಉಲ್ಲಂಘಿಸಿದ್ದಾರೆ ಎಂದು ಹೇಳಲಾಗಿತ್ತು.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ತವ್ಯ ಲೋಪದ ಹಿನ್ನೆಲೆಯಲ್ಲಿ ತಾಲೂಕು ಆರೋಗ್ಯಾಧಿಕಾರಿ ಮಕಾನ ದಾರ ಅವರನ್ನು ಸೇವೆಯಿಂದ ಅಮಾನತು ಮಾಡ ಲಾಗಿದೆ.ಇನ್ನೂ ಈಗಾಗಲೇ ಈ ಮೊದಲು ಕೆಲ ಆರೋಗ್ಯ ಸಿಬ್ಬಂದಿಗಳನ್ನು ಕೂಡಾ ಅಮಾನತು ಮಾಡಲಾಗಿದೆ.