ಬೆಂಗಳೂರು –
ವಿದ್ಯುತ್ ಕಳವು ಪ್ರಕರಣ ಕುರಿತಾದ ವಿಚಾರಕ್ಕೆ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಗೆ ಸಾವಿರಾರು ರೂಪಾಯಿ ದಂಡ ವನ್ನು ವಿಧಿಸಲಾಗಿದೆ.ಹೌದು ಜೆಪಿ ನಗರದಲ್ಲಿರುವ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರ ನಿವಾಸಕ್ಕೆ ದೀಪಾವಳಿ ದೀಪಾಲಂಕಾರಕ್ಕಾಗಿ ಅನಧಿಕೃತವಾಗಿ ಬೀದಿ ದೀಪದ ಕಂಬದಿಂದ ನೇರವಾಗಿ ವಿದ್ಯುತ್ ಪಡೆದಿರುವ ಆರೋಪದ ಮೇಲೆ ಬೆಸ್ಕಾಂ ಎಫ್ ಐಆರ್ ದಾಖಲಿಸಿದೆ.
ಕುಮಾರಸ್ವಾಮಿ ಅವರ ಮನೆಯನ್ನು ಪರಿಶೀಲಿ ಸಿದ ಬೆಸ್ಕಾಂ ಅಧಿಕಾರಿಗಳು ಏಳು ದಿನಗಳೊಳಗೆ 68,000 ರೂ. ದಂಡ ಪಾವತಿಸುವಂತೆ ಸೂಚಿಸಿ ದ್ದಾರೆ. ಒಂದು ಅಥವಾ ಎರಡು ದಿನಗಳಲ್ಲಿ ದಂಡ ಪಾವತಿಸುವುದಾಗಿ ಮಾಜಿ ಸಿಎಂ ಹೇಳಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..