ಹಾವೇರಿ –
ಶಾಲಾ ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ ಮಾಡಿದ ಘಟನೆ ಹಾವೇರಿ ತಾಲೂಕಿನ ದೇವಿಹೊಸೂರು ಗ್ರಾಮದಲ್ಲಿ ನಡೆದಿದೆ.ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿದ್ದ ಹೆಜ್ಜೇನು ದಾಳಿ ನಡೆಸಿ 20ಕ್ಕೂ ಅಧಿಕ ವಿದ್ಯಾರ್ಥಿಗಳಿಗೆ ಹೆಜ್ಜೇನು ಕಚ್ಚಿವೆ.
ಹೆಜ್ಜೇನು ದಾಳಿಯಿಂದ ವಿದ್ಯಾರ್ಥಿಗಳು ಅಸ್ವಸ್ಥಗೊಂಡಿದ್ದು ಸಧ್ಯ ಆ ಮಕ್ಕಳಿಗೆ ಸೂಕ್ತವಾದ ಚಿಕಿತ್ಸೆ ಯನ್ನು ನೀಡಲಾಗು ತ್ತಿದ್ದು ಆರೋಗ್ಯ ವಾಗಿದ್ದಾರೆ ಎಲ್ಲಾ ಮಕ್ಕಳು
ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ.ಇನ್ನೂ ಘಟನೆ ಹಿನ್ನೆಲೆಯಲ್ಲಿ ಕೆಲವು ವಿದ್ಯಾರ್ಥಿಗಳನ್ನು ಹಾವೇರಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.ಹೆಜ್ಜೇನು ದಾಳಿಯಿಂದ ವಿದ್ಯಾರ್ಥಿ ಗಳು ಮತ್ತು ಪೋಷಕರು ಕಂಗಾಲಾಗಿದ್ದಾರೆ.ಹಾವೇರಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.