ಬೆಂಗಳೂರು –
ಹೈಟೆಕ್ ವೇಶ್ಯಾವಾಟಿಕೆ ಜಾಲದ ಅಡ್ಡೆಯ ಮೇಲೆ ಪೊಲೀಸರು ದಾಳಿ ಮಾಡಿ ಎಂಟು ಜನರನ್ನು ಬಂಧನ ಮಾಡಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ ಹೌದು ಸ್ಪಾ ಮತ್ತು ಸಲೂನ್ ಹೆಸರಿನಲ್ಲಿ ರಾಜ್ಯ ಹೊರ ರಾಜ್ಯ ವಿದೇಶಿ ಯುವತಿಯರನ್ನು ಕರೆತಂದು ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ಎರಡು ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ.
ದಾಳಿಯ ಸಂದರ್ಭದಲ್ಲಿ ವೇಶ್ಯಾವಾಟಿಕೆ ದಂಧೆ ನಡೆಸುತ್ತಿದ್ದ ನಾಲ್ವರು ಹಾಗೂ ನಾಲ್ವರು ಗಿರಾಕಿಗಳನ್ನು ಬಂಧಿಸಲಾಗಿದೆ ರಾಜ್ಯ, ಹೊರ ರಾಜ್ಯ ಮತ್ತು ವಿದೇಶದ ಎಂಟು ಮಂದಿ ಯುವತಿಯರನ್ನು ರಕ್ಷಿಸಲಾಗಿದೆ.ಇಂದಿರಾ ನಗರದ 100 ಅಡಿ ರಸ್ತೆಯ ನಿರಂಜನ್,ರೂಬಿ ಬಂಧಿತ ಆರೋಪಿಗಳಾ ಗಿದ್ದಾರೆ.ಇವರು ಸಲೂನ್ ಸೆಂಟರ್ ತೆರೆದು ಯುವತಿಯ ರನ್ನು ಅಕ್ರಮವಾಗಿ ಇರಿಸಿಕೊಂಡು ಗಿರಾಕಿಗಳನ್ನು ಸೆಳೆದು ವೇಶ್ಯಾವಾಟಿಕೆ ನಡೆಸುತ್ತಿದ್ದರು.ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿದ್ದಾರೆ.
ಜೆಪಿ ನಗರದ ಐದನೇ ಹಂತದಲ್ಲಿ ಸ್ಪಾ ಹೆಸರಲ್ಲಿ ವೇಶ್ಯಾವಾ ಟಿಕೆ ನಡೆಸುತ್ತಿದ್ದ ಆರೋಪಿ ಶರೀಫ್ ಸಾಬ್ ಮತ್ತು ರಾಜ ಶೇಖರ್ ಅವರನ್ನು ಬಂಧಿಸಿದ್ದುನಾಲ್ವರು ಯುವತಿಯರನ್ನು ರಕ್ಷಿಸಲಾಗಿದೆ.ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕ ರಣ ದಾಖಲಾಗಿದೆ.