ಬೆಂಗಳೂರು –
ರಾಜ್ಯ ಸರ್ಕಾರ ಶಿಕ್ಷಣ ಇಲಾಖೆ ರಾಜ್ಯದಲ್ಲಿ ನಡೆಸಲು ಮುಂದಾಗಿರುವ ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ಪ್ರಶ್ನಿಸಿ ಹೈಕೊರ್ಟ್ ಗೆ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೊರ್ಟ್ ವಜಾಗೊಳಿಸಿ ಪರೀಕ್ಷೆ ಮಾಡಲು ಗ್ರೀನ್ ಸಿಗ್ನಲ್ ನೀಡಿದೆ.ಹೌದು ಮಹಾಮಾರಿ ಕೊರೋನಾ ಸೋಂಕಿನ ನಡುವೆಯೂ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಹಿತದೃಷ್ಠಿಯಿಂದ ಜುಲೈ.19 ಹಾಗೂ 22 ರಂದು ಪರೀಕ್ಷೆಯನ್ನು ನಿಗದಿಪಡಿಸ ಲಾಗಿತ್ತು. ಪರೀಕ್ಷೆಯನ್ನು ಮಾಡಲುಮುಂದಾಗಿದ್ದನ್ನು ಪ್ರಶ್ನೆ ಮಾಡಿ ಪ್ರಶ್ನಿಸಲಾಗಿದ್ದ ಪಿಐಎಲ್ ಅರ್ಜಿ ಯನ್ನು ಹೈಕೋರ್ಟ್ ವಜಾಗೊಳಿಸಿ ಪರೀಕ್ಷೆಗೆ ಹೈಕೋರ್ಟ್ ಗ್ರೀನ್ ಸಿಗ್ನಲ್ ನೀಡಿದೆ.

ಇಂದು ರಾಜ್ಯ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿದ್ದ ಪರೀಕ್ಷೆಯ ರದ್ದು ಕೋರಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಾಯ ಈ ಸಂದರ್ಭದಲ್ಲಿ ಸರ್ಕಾರವು ರಾಜ್ಯದಲ್ಲಿ ಕೊರೋನಾ ಪಾಸಿಟಿವಿಟಿ ದರ 1.48ಕ್ಕೆ ಇಳಿಕೆ ಕಂಡಿದೆ. ಕೋವಿಡ್ 2ನೇ ಅಲೆಯು ಕಡಿಮೆಗೊಂಡಿದೆ.ಹೀಗಾಗಿ ಕೊರೋನಾ ಸೋಂಕಿನ ನಿಯಂತ್ರಣ ಮಾರ್ಗಸೂಚಿ ಕ್ರಮಗಳನ್ನು ಪಾಲಿಸಿ, ನಿಗದಿ ಪಡಿಸಿರುವಂತೆಯೇ ಪರೀಕ್ಷೆ ನಡೆಸಲಾಗುತ್ತದೆ ಎಂಬುದಾಗಿ ಮಾಹಿತಿ ನೀಡಿದೆ.ಜುಲೈ.19 ಹಾಗೂ 22ರಂದು ಎಸ್ ಎಸ್ ಎಲ್ ಸಿ ಪರೀಕ್ಷೆಯನ್ನು ನಿಗದಿ ಪಡಿಸಲಾಗಿದೆ. ನಿಗದಿಯಂತೆ ಕೊರೋನಾ ಮುಂಜಾಗ್ರತಾ ಕ್ರಮಗಳೊಂದಿಗೆ ಬಹು ಆಯ್ಕೆ ಮಾದರಿಯಂತೆ ಎರಡು ದಿನ ಪರೀಕ್ಷೆ ನಡೆಸಲಾಗುತ್ತಿದೆ.ಕೊರೋನಾ ಸೋಂಕಿನ ಪಾಸಿಟಿವಿಟಿ ದರ ಕಡಿಮೆಗೊಂಡಿರುವ ಕಾರಣದಿಂದಾಗಿಯೇ ಪರೀಕ್ಷೆ ನಡೆಸಲಾಗುತ್ತದೆ ಎಂದು ಹೈಕೋರ್ಟ್ ನ್ಯಾಯಪೀಠಕ್ಕೆ ಸರ್ಕಾರ ಮನವಿ ಮಾಡಿತು.ವಾದ ವಿವಾದವನ್ನು ಆಲಿಸಿದ ಹೈಕೋರ್ಟ್ ನ ವಿಭಾಗೀಯ ಪೀಠದ ನ್ಯಾಯಮೂರ್ತಿಗಳಾದ ನಾಗರತ್ನ ಹಾಗೂ ಸಂಜೀವ್ ಕುಮಾರ್ ದ್ವಿಸದಸ್ಯ ಪೀಠವು, ಒತ್ತಾಯದಿಂದ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಸಬಾರದು. ವಿದ್ಯಾರ್ಥಿಗಳ ಹಿತದೃಷ್ಠಿಯಿಂದ ಪರೀಕ್ಷೆ ನಡೆಸುವುದು ಸೂಕ್ತ. ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ರಾಜ್ಯ ಸರ್ಕಾರ ರೂಪಿಸಿರುವಂತ ಎಸ್ ಓಪಿ ಕ್ರಮಗಳನ್ನು ಪಾಲಿಸಬೇಕು ಎಂಬುದಾಗಿ ಅಭಿಪ್ರಾಯ ಪಟ್ಟು, ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂಧ ಸಲ್ಲಿಕೆಯಾಗಿದ್ದಂತ ಪಿಐಎಲ್ ಅರ್ಜಿಯನ್ನು ವಜಾಗೊಳಿಸಿ, ಎಸ್ ಎಸ್ ಎಲ್ ಸಿ ಪರೀಕ್ಷೆಗೆ ಗ್ರೀನ್ ಸಿಗ್ನಲ್ ನೀಡಿದೆ.
