ಬೆಂಗಳೂರು –
ಇತ್ತೀಚಿಗೆ ಧಾರವಾಡದ ಇಟಿಗಟ್ಟಿ ಕ್ರಾಸ್ ನಲ್ಲಿ ನಡೆದ ಭೀಕರ ರಸ್ತೆ ಅಪಘಾತದಿಂದ ಸರ್ಕಾರ ಮತ್ತು ಪೊಲೀಸ್ ಇಲಾಖೆಯವರು ಸ್ವಲ್ಪು ಎಚ್ಚೆತ್ತು ಕೊಂಡಿದ್ದಾರೆ. ಹುಬ್ಬಳ್ಳಿ ಧಾರವಾಡ ನಡುವಿನ ಈ ಒಂದು ಹೆದ್ದಾರಿಯನ್ನು ಕೇಂದ್ರ ಸರ್ಕಾರ ಅಭಿವೃದ್ದಿ ಪಡಿಸುವ ಕುರಿತಂತೆ ಈಗಾಗಲೇ ಮಹತ್ವದ ನಿರ್ಧಾರವನ್ನು ಕೈಗೊಂಡ ಬೆನ್ನಲ್ಲೇ ಈಗ ರಾಜ್ಯ ಸರ್ಕಾರ ಮತ್ತೊಂದು ಮಹತ್ವದ ನಿರ್ಧಾರವನ್ನು ಕೈಗೊಂಡಿದೆ.



ಹೌದು ಧಾರವಾಡ ಜಿಲ್ಲೆಯ ಪೊಲೀಸ್ ವ್ಯಾಪ್ತಿಯ ಲ್ಲಿನ ಹೆದ್ದಾರಿಗಳನ್ನು ಹುಬ್ಬಳ್ಳಿ ಧಾರವಾಡ ಪೊಲೀಸ್ ಕಮೀಷನರ್ ವ್ಯಾಪ್ತಿಗೆ ಒಳಪಡಿಸುವ ಕುರಿತಂತೆ ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾ ಧಿಕಾರಿ ಕೃಷ್ಣಕಾಂತ ರಾಜ್ಯ ಪೊಲೀಸ್ ಮಹಾನಿರ್ದೇ ಶಕರಿಗೆ ಪತ್ರವೊಂದನ್ನು ಬರೆದಿದ್ದರು.






ಧಾರವಾಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಮನವಿಗೆ ಸ್ಪಂದಿಸಿದ ರಾಜ್ಯ ಸರ್ಕಾರ ಎಲ್ಲವನ್ನೂ ಪರಿಶೀಲನೆ ಮಾಡಿ ಧಾರವಾಡ ಜಿಲ್ಲಾ ವ್ಯಾಪ್ತಿಯಲ್ಲಿ ಬರುವ ಧಾರವಾಡ ಮತ್ತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿನ ಹೆದ್ದಾರಿ ಗಳನ್ನು ಧಾರವಾಡ ಸಂಚಾರಿ ಪೊಲೀಸ್ ಠಾಣೆಗೆ ಮತ್ತು ಹುಬ್ಬಳ್ಳಿಯಲ್ಲಿನ ಉತ್ತರ ಸಂಚಾರಿ ಪೊಲೀಸ್ ಠಾಣೆಗೆ ಸೇರಿಸಿ ಆದೇಶವನ್ನು ಹೊರಡಿ ಸಿದೆ. ಇನ್ನೂ ಮುಂದೆ ಹೆದ್ದಾರಿ ವ್ಯಾಪ್ತಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತರ ವ್ಯಾಪ್ತಿಗೆ ಒಳಪಡಲಿದ್ದು ಇನ್ನಾದರೂ ಅಪಘಾತಗಳ ನಿಯಂತ್ರಣ ಕುರಿತಂತೆ ಪೊಲೀಸ್ ಆಯುಕ್ತರು ನಿಯಂತ್ರಣಕ್ಕೆ ಮುಂದಾಗುತ್ತಾರೆನಾ ಆ ಒಂದು ನಿಟ್ಟಿನಲ್ಲಿ ಕೆಲವೊಂದಿಷ್ಟು ಬದಲಾವಣೆಗಳನ್ನು ಮಾಡುತ್ತಾರೆನಾ ಕಾದು ನೋಡಬೇಕು.