ಶಾಲಾ ಕಾಲೇಜುಗಳಿಗೆ ಮತ್ತೆ ರಜೆ ಘೋಷಣೆ – ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರ ರಜೆ ಘೋಷಣೆ…..

Suddi Sante Desk
ಶಾಲಾ ಕಾಲೇಜುಗಳಿಗೆ ಮತ್ತೆ ರಜೆ ಘೋಷಣೆ – ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಂಗಳವಾರ ರಜೆ ಘೋಷಣೆ…..

ಕೊಡಗು

ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಫೆಂಗಲ್‌ ಚಂಡಮಾರುತ ಉಂಟಾಗಿದ್ದು ದಕ್ಷಿಣ ಭಾರತದ ರಾಜ್ಯಗಳ ಮೇಲೆ ಭಾರೀ ಪರಿಣಾಮ ಬೀರಿದೆ. ತಮಿಳುನಾಡು ಸಂಪೂರ್ಣ ಮಳೆಯಲ್ಲಿ ತೊಯ್ದು ಹೋಗಿದ್ದರೆ, ಕರ್ನಾಟಕದಲ್ಲೂ ಮಳೆ ಕೆಲವು ಜಿಲ್ಲೆಗಳಲ್ಲಿ ಅಬ್ಬರಿಸಿದೆ.ಮುಂಜಾಗ್ರತಾ ಕ್ರಮವಾಗಿ ರಾಜ್ಯದ ಹಲವು ಜಿಲ್ಲೆಯಲ್ಲಿ ಮುಂಜಾಗ್ರತಾ ಹಿನ್ನಲೆ ಯಲ್ಲಿ ಶಾಲೆ ಗಳಿಗೆ ರಜೆ ಘೋಷಣೆ ಮಾಡಲಾಗಿದೆ

ಹೌದು ಕೆಲವೊಂದು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಶಾಲಾ-ಕಾಲೇಜಿಗೆ ರಜೆ ನೀಡಿದ್ದು ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸೋಮವಾರ ರಜೆ ಘೋಷಣೆ ಮಾಡಲಾಗಿದ್ದರೆ, ಕೊಡಗು ಜಿಲ್ಲೆಯಲ್ಲಿ ಮಂಗಳವಾರವೂ ರಜೆ ಘೋಷಣೆ ಮಾಡಲಾಗಿದೆ. ಫೆಂಗಲ್ ಚಂಡಮಾರುತದ ಎಫೆಕ್ಟ್ ಕೊಡಗಿನಲ್ಲಿ ಭಾರೀ ಮಳೆಯಾಗುತ್ತಿದೆ. ಮಂಗಳವಾರ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.

ಕೊಡಗು ನಾಳೆ ಬೆಳಿಗ್ಗೆ 8.30 ವರೆಗೆ ರೆಡ್ ಅಲರ್ಟ್ ಘೋಷಣೆಯಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ರಜೆ ಘೋಷಣೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಪದವಿ, ಸ್ನಾತಕೋತ್ತರ ಪದವಿ ಹೊರತು ಪಡಿಸಿ ಶಾಲಾ ಕಾಲೇಜುಗಳಿಗೆ ರಜೆ ನೀಡಲಾಗಿದೆ ಎಂದು ಕೊಡಗು ಜಿಲ್ಲಾಧಿಕಾರಿ ವೆಂಕಟ್ ರಾಜಾ ಆದೇಶ ಹೊರಡಿಸಿದ್ದಾರೆ.ಫೆಂಗಲ್‌ ಚಂಡಮಾರುತದ ಹಿನ್ನಲೆ ಯಲ್ಲಿ ಹವಾಮಾನ ಇಲಾಖೆಯಿಂದ ರೆಡ್‌ ಅಲರ್ಟ್‌ ಘೋಷಿಸಲಾಗಿರುವ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಕೊಡಗು ಜಿಲ್ಲೆಯ ಎಲ್ಲಾ ಅಂಗನವಾಡಿ ಮತ್ತು ಶಾಲಾ ಕಾಲೇಜುಗಳಿಗೆ (ಪದವಿ ಮತ್ತು ಸ್ನಾತಕೋತ್ತರ ಪದವಿ ಕಾಲೇಜುಗಳನ್ನು ಹೊರತು ಪಡಿಸಿ) ದಿನಾಂಕ 03.12.2024 (ಮಂಗಳವಾರ) ರಂದು ಒಂದು ದಿವಸದ ರಜೆಯನ್ನು ಘೋಷಿಸಿದೆ’

ಚಿಕ್ಕಮಗಳೂರು ಜಿಲ್ಲೆಯ ಶಾಲೆ-ಕಾಲೇಜಿಗೂ ರಜೆ ಹೌದು ಫೆಂಗಲ್‌ ಚಂಡಮಾರುತ ಹಿನ್ನೆಲೆ ಭಾರೀ ಮಳೆ ಮುನ್ಸೂಚನೆ ಇರುವ ಕಾರಣ, ಚಿಕ್ಕಮಗಳೂರು ಜಿಲ್ಲೆಯಾದ್ಯಂತ ರಜೆ ಘೋಷಣೆ ಮಾಡಲಾಗಿದೆ. ಪ್ರಾಥಮಿಕ, ಪ್ರೌಢ ಶಾಲೆ ಹಾಗೂ ಅಂಗನವಾಡಿಗಳಿಗೆ ರಜೆ ಘೋಷಣೆ ಮಾಡಲಾಗಿದೆ. 3-12-24ರ ಮಂಗಳ ವಾರ ಒಂದು ದಿನ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.

ಕೋಲಾರದ ಶಾಲಾ ಕಾಲೇಜಿಗೂ ರಜೆ ನಿರಂತರ ಜಡಿ ಮಳೆ ಹಾಗೂ ವಿಪರೀತ ಚಳಿ ಹಿನ್ನೆಲೆಯಲ್ಲಿ ಮಕ್ಕಳ ಆರೋಗ್ಯ ದೃಷ್ಟಿಯಿಂದ ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಗಳ ಸಲಹೆ ಮೇರೆಗೆ ಮಂಗಳವಾರವೂ ಕೋಲಾರದ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸ ಲಾಗಿದೆ. ಕೋಲಾರ ಡಿಸಿ ಅಕ್ರಂ ಪಾಷಾ ಆದೇಶ ಹೊರಡಿಸಿದ್ದಾರೆ. ನಾಳಿನ ರಜೆಯನ್ನು ಮತ್ತೊಂದು ರಜಾ ದಿನದಲ್ಲಿ ತರಗತಿ ನಡೆಸಿ ಸರಿದೂಗಿಸಲು ಸೂಚನೆ ನೀಡಲಾಗಿದೆ.

ಉಡುಪಿಯಲ್ಲೂ ರಜೆ ಘೋಷಣೆ ಉಡುಪಿ ಜಿಲ್ಲೆಯ ಅಂಗನವಾಡಿ ಶಾಲೆ ಹಾಗೂ ಪದವಿಪೂರ್ವ ಕಾಲೇಜು  ಗಳಿಗೆ ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ. ಉಡುಪಿ ಜಿಲ್ಲಾಧಿಕಾರಿ ಡಾ ವಿದ್ಯಾಕುಮಾರಿ ಆದೇಶ ಹೊರಡಿಸಿದ್ದಾರೆ. ಉಡುಪಿ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ವ್ಯಾಪಕವಾಗಿ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.