ಬೆಂಗಳೂರು –
ತಡವಾಗಿ ಆದರೂ ರಾಜ್ಯದಲ್ಲಿ ಮಳೆರಾಯ ಅಬ್ಬರಿಸುತ್ತಿದ್ದು ರಾಜ್ಯದ ಹಲವೆಡೆ ಎರಡು ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದ್ದು ಇನ್ನೂ ಇತ್ತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆ ಯಂತೆ ಆರೆಂಜ್ ಅಲಟ್೯ ಘೋಷಣೆ ಮಾಡಲಾಗಿದೆ.
ಇನ್ನೂ ಜಿಲ್ಲೆಯ ಎಲ್ಲಾ ಅಂಗನವಾಡಿ ಕೇಂದ್ರ ಗಳು, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿ ಪೂರ್ವ ಕಾಲೇಜು, ಸರ್ಕಾರಿ ಅನುದಾನಿತ ಮತ್ತು ಖಾಸಗಿ ವಿದ್ಯಾ ಸಂಸ್ಥೆಗಳಿಗೆ ಜುಲೈ 6ರ ಗುರು ವಾರ ರಜೆಯನ್ನು ಘೋಷಣೆ ಮಾಡಲಾಗಿದೆ. ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ರಜೆ ಘೋಷಿ ಸಿದ್ದಾರೆ.ಮುಂಜಾಗ್ರತಾ ಕ್ರಮವಾಗಿ ಈ ಒಂದು ರಜೆಯನ್ನು ಘೋಷಣೆ ಮಾಡಲಾಗಿದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು.