ಕಾರವಾರ – ಕೊಡಗು –
ಉತ್ತರ ಕನ್ನಡ ಜಿಲ್ಲೆಯಾದ್ಯಂತ ಜುಲೈ 7ರಂದು ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ. ನೈಸರ್ಗಿಕ ವಿಪತ್ತು ನಿರ್ವಹಣಾ ಸಮಿತಿಯು ಮುನ್ಸೂಚನೆ ನೀಡಿದೆ ಜಿಲ್ಲೆಯಲ್ಲಿ ರೆಡ್ ಅಲರ್ಟ್ ಪ್ರಕಟಿಸಿದೆ ಜುಲೈ 8ರಂದು ‘ಆರೆಂಜ್ ಅಲರ್ಟ್’ ನೀಡಿದೆ.ಮುನ್ನೆಚ್ಚರಿಕಾ ಕ್ರಮವಾಗಿ ಜುಲೈ 7ರಂದು ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ಇನ್ನೂ ಇತ್ತ ಕೊಡಗು ಜಿಲ್ಲೆಯಲ್ಲೂ ನಾಳೆ ಶಾಲೆಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.ಮುಂಜಾಗ್ರತಾ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ
ಜಿಲ್ಲೆಯಲ್ಲಿ ಬುಧವಾರ ಮಳೆಯ ಅಬ್ಬರ ತುಸು ತಗ್ಗಿತ್ತು. ಮುಂಡಗೋಡ ತಾಲ್ಲೂಕಿನಲ್ಲಿ ಬೆಳಿಗ್ಗೆಯಿಂದಲೇ ವರ್ಷ ಧಾರೆಯಾಯಿತು.ಉಳಿದಂತೆ,ಭಟ್ಕಳ,ಹೊನ್ನಾವರ, ಕುಮಟಾ ತಾಲ್ಲೂಕುಗಳಲ್ಲಿ ಜಿಟಿಜಿಟಿ ಮಳೆ ಮುಂದುವರಿ ಯಿತು.ಕಾರವಾರದಲ್ಲಿ ಮಧ್ಯಾಹ್ನದ ತನಕ ಮೋಡ ಮತ್ತು ಬಿಸಿಲಿನ ವಾತಾವರಣ ಕಂಡು ಬಂದಿತು.