ಶಾಲೆಗಳಿಗೆ ರಜೆ ಘೋಷಣೆ – ಬಂದ್ ಕರೆ ಹಿನ್ನಲೆಯಲ್ಲಿ ಕಲಬುರಗಿ ಯಲ್ಲಿ ರಜೆ ಘೋಷಣೆ…..

Suddi Sante Desk
ಶಾಲೆಗಳಿಗೆ ರಜೆ ಘೋಷಣೆ – ಬಂದ್ ಕರೆ ಹಿನ್ನಲೆಯಲ್ಲಿ ಕಲಬುರಗಿ ಯಲ್ಲಿ ರಜೆ ಘೋಷಣೆ…..

ಕಲಬುರಗಿ

ಸಂವಿಧಾನ ರಕ್ಷಣಾ ಸಮಿತಿ ಹಾಗೂ ವಿವಿಧ ಸಂಘಟನೆಗಳು ಡಿ.24ರಂದು ಕಲಬುರಗಿ ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಮಕ್ಕಳ ಸುರಕ್ಷತೆ ದೃಷ್ಠಿಯಿಂದ ಡಿ.24 ರಂದು ಕಲಬುರಗಿ ನಗರದ ಸರಕಾರಿ, ಅನುದಾನಿತ ಹಾಗೂ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ.ಈ ಕುರಿತು ಡಿ.ಡಿ.ಪಿ‌.ಐ ಸೂರ್ಯಕಾಂತ ಮದಾನೆ ಅವರು ಪ್ರತ್ಯೇಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ಲದೆ ಕಲಬುರಗಿ ನಗರದ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ದೃಷ್ಠಿಯಿಂದ ಡಿ.23ರ ರಾತ್ರಿ 12 ಗಂಟೆಯಿಂದ ಡಿ.24ರ ರಾತ್ರಿ 12 ಗಂಟೆ ವರೆಗೆ ಕರ್ನಾಟಕ ಅಬಕಾರಿ ಕಾಯ್ದೆ-1965ರ ಕಲಂ 21ರಂತೆ ಕಲಬುರಗಿ ತಾಲೂಕಿನಾದ್ಯಂತ ಎಲ್ಲಾ ತರಹದ ಮದ್ಯ ಮಾರಾಟ ನಿಷೇಧಿಸಿ ಜಿಲ್ಲಾಧಿಕಾರಿ ಬಿ.ಫೌಝಿಯಾ ತರನ್ನುಮ್ ಅವರು ಆದೇಶ ಹೊರಡಿಸಿದ್ದಾರೆ.

ಸುದ್ದಿ ಸಂತೆ ನ್ಯೂಸ್ ಕಲಬುರಗಿ…..

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.