This is the title of the web page
This is the title of the web page

Live Stream

[ytplayer id=’1198′]

May 2024
T F S S M T W
 1
2345678
9101112131415
16171819202122
23242526272829
3031  

| Latest Version 8.0.1 |

Sports News

ಶಾಲಾ ಕಾಲೇಜಿಗೆ ರಜೆ ಘೋಷಣೆ ಕೊಡಗು,ಉಡುಪಿ,ಶಿವಮೊಗ್ಗ, ಉತ್ತರ ಕನ್ನಡ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ರಜೆ ಘೋಷಣೆ…..

WhatsApp Group Join Now
Telegram Group Join Now

ಬೆಂಗಳೂರು –

ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದ್ದು ಉತ್ತರ ಕನ್ನಡ,ದಕ್ಷಿಣ ಕನ್ನಡ,ಉಡುಪಿ ಜಿಲ್ಲೆಗಳಲ್ಲಿ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದೆ.ಶಿವಮೊಗ್ಗ ಜಿಲ್ಲೆಯಲ್ಲಿನ ಸಾಗರ,ಹೊಸನಗರ ಮತ್ತು ತೀರ್ಥಹಳ್ಳಿ ತಾಲ್ಲೂಕುಗಳಲ್ಲಿ ಅತಿವೃಷ್ಟಿ ಹಿನ್ನೆಲೆಯಲ್ಲಿ ಶಾಲೆಗಳಿಗೆ ರಜೆ ಘೋಷಿಸಿದೆ. ಮುಂದಿನ 24 ಗಂಟೆಗಳ ಅವಧಿಯಲ್ಲಿ ಭಾರೀ ಮಳೆ ಸುರಿಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ, ಉಡುಪಿ,ಉತ್ತರ ಕನ್ನಡ,ಕೊಡಗು ಜಿಲ್ಲೆಯಲ್ಲಿನ ಶಾಲೆ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ. ಅಲ್ಲದೇ ಚಿಕ್ಕಮಗಳೂರು ಹಾಗೂ ಉತ್ತರ ಕನ್ನಡ ಜಿಲ್ಲೆಯ ಕೆಲವು ಶಾಲೆ,ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಶಿವಮೊಗ್ಗ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳ ಆಡಳಿತ ಮಂಡಳಿಗಳು ರಜೆ ಘೋಷಣೆ ಮಾಡಿವೆ.ಕರಾವಳಿಯಲ್ಲಿ ರಜೆ ಘೋಷಣೆ ಹೌದು ಒಂದು ವಾರದಿಂದ ಕರಾವಳಿ ಮತ್ತು ಮಲೆನಾಡಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಯಲ್ಲಿ ಹವಾಮಾನ ಇಲಾಖೆಯ ಮುನ್ಸೂಚನೆಯ ಮೇರೆಗೆ ಉಡುಪಿ ಜಿಲ್ಲೆಯ ಅಂಗನವಾಡಿ,ಶಾಲೆ,ಪ್ರೌಢ ಶಾಲೆ,ಪದವಿಪೂರ್ವ ಕಾಲೇಜು ಹಾಗೂ ಪದವಿ ಕಾಲೇಜು ಗಳಿಗೆ ರಜೆಯನ್ನು ಘೋಷಣೆ ಮಾಡಿ ಜಿಲ್ಲಾಧಿಕಾರಿ ಕೂರ್ಮರಾವ್‌ ಎಂ.ಆದೇಶ ಹೊರಡಿಸಿದ್ದಾರೆ. ಜಿಲ್ಲೆಯಾ ದ್ಯಂತ ಆರೆಂಜ್‌ ಅಲರ್ಟ್‌ ಘೋಷಣೆ ಮಾಡಲಾಗಿದ್ದು ಜನರು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆಯನ್ನು ನೀಡಲಾಗಿದೆ.ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ,ಸುಳ್ಯ,ಪುತ್ತೂರು,ಮಂಗಳೂರು,ಬಂಟ್ವಾಳ, ಮೂಲ್ಕಿ ಸೇರಿದಂತೆ ಜಿಲ್ಲೆಯಾದ್ಯಂತ ಭಾರೀ ಪ್ರಮಾಣದಲ್ಲಿ ಮಳೆ ಸುರಿಯುತ್ತಿದೆ.ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆ ಮುಂದುವರಿಯುವ ಸಾಧ್ಯತೆಯ ಹಿನ್ನೆಲೆಯಲ್ಲಿ ಜಿಲ್ಲೆಯ ಅಂಗನವಾಡಿ,ಪ್ರಾಥಮಿಕ,ಪ್ರೌಢಶಾಲೆ,ಪದವಿ ಪೂರ್ವ ಕಾಲೇಜು ಹಾಗೂ ಪದವಿ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ರಾಜೇಂದ್ರ ಅವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.ಮಲೆನಾಡಲ್ಲಿ ಮಳೆ ಅಬ್ಬರ ಕೊಡಗು ಜಿಲ್ಲೆಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಜಿಲ್ಲೆಯಾದ್ಯಂತ ಶಾಲೆ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡಲಾಗಿದೆ.ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ,ಕಳಸ,ಶೃಂಗೇರಿ,ಎನ್.ಆರ್.ಪುರ ಹಾಗೂ ಕೊಪ್ಪ ತಾಲೂಕಿನಾದ್ಯಂತ ಶಾಲೆ,ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಉತ್ತರ ಕನ್ನಡ ಜಿಲ್ಲೆಯ ಕಾರವಾರ ತಾಲೂಕಿನಾದ್ಯಂತ ರಜೆ ಘೋಷಿಸಿದೆ. ಶಿರಸಿ, ಸಿದ್ದಾಪುರ, ಕಾರವಾರದಲ್ಲಿ ಭಾರೀ ಮಳೆಯಾಗಿದೆ.


Google News

 

 

WhatsApp Group Join Now
Telegram Group Join Now
Suddi Sante Desk