ಶಿವಮೊಗ್ಗ –
ನಗರದಲ್ಲಿ ವಿ ಡಿ ಸಾವರ್ಕರ್ ಫ್ಲೆಕ್ಸ್ ವಿವಾದದಿಂದಾಗಿ ಬಿಗುವಿನ ವಾತಾವಣದ ಹಿನ್ನಲೆಯಲ್ಲಿ ಅಲ್ಲದೇ ಎರಡು ಕಡೆಗಳಲ್ಲಿ ಇಬ್ಬರಿಗೆ ಚಾಕುವಿನಿಂದ ಇರಿದ ಪರಿಣಾಮ ಮತ್ತಷ್ಟು ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತೆ ಆಗಿದೆ. ಮುಂಜಾಗ್ರತಾ ಕ್ರಮವಾಗಿ ಶಿವಮೊಗ್ಗ ನಗರ ಹಾಗೂ ಭದ್ರಾವತಿಯಲ್ಲಿ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.ಹೀಗಾಗಿ ನಾಳೆ ಶಿವಮೊಗ್ಗ ಮತ್ತು ಭದ್ರಾವತಿ ನಗರದ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಈ ಕುರಿತಂತೆ ಜಿಲ್ಲಾಧಿಕಾರಿ ಸೆಲ್ವಮಣಿ ಅವರು ಆದೇಶ ಹೊರಡಿಸಿದ್ದು, 144 ಸೆಕ್ಷನ್ ಜಾರಿಗೊಳಿಸಿರುವ ಹಿನ್ನೆಲೆ ಯಲ್ಲಿ ಶಿವಮೊಗ್ಗ ನಗರ ಹಾಗೂ ಭದ್ರಾವತಿ ಪಟ್ಟಣ ವ್ಯಾಪ್ತಿಯ ಎಲ್ಲಾ ಶಾಲಾ ಕಾಲೇಜುಗಳಿಗೆ ದಿನಾಂಕ 16/08/2022 ರಂದು ರಜೆ ಘೋಷಿಸಲಾಗಿದೆ ಎಂಬುದಾಗಿ ಹೇಳಿದ್ದಾರೆ.