ಬೆಂಗಳೂರು –
ರಾಜ್ಯದಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಯನ್ನು ಘೋಷಣೆ ಮಾಡಲಾಗಿದೆ ಹೌದು ಚಿಕ್ಕ ಮಗಳೂರು,ಕೊಡಗು ಸೇರಿದಂತೆ ಕರ್ನಾಟಕದ ಹಲವೆಡೆ ಭಾರೀ ಮಳೆಯಾಗುತ್ತಿದ್ದು ಮುಂಜಾ ಗ್ರತೆ ಹಿನ್ನೆಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ
ಮುಂಜಾಗೃತ ಕ್ರಮವಾಗಿ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ನಾಳೆ (ಜು.31) ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.ಕೆಲವು ಜಿಲ್ಲೆಗಳಲ್ಲಿ ಪ್ರವಾಹ ಉಂಟಾಗಿ, ಜನಜೀವನ ಅಸ್ತವ್ಯಸ್ತವಾಗಿದೆ. ಮನೆಗಳನ್ನು ಕಳೆದುಕೊಂಡು ಕಂಗಾಲಾಗಿದ್ದಾರೆ. ಈ ಹಿನ್ನಲೆ ಮುಂಜಾಗೃತ ಕ್ರಮವಾಗಿ ಚಿಕ್ಕಮಗ ಳೂರು ಜಿಲ್ಲೆಯ 6 ತಾಲೂಕಿನ ಅಂಗನವಾಡಿ, ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಣೆ ಮಾಡಲಾಗಿದೆ.
ಜುಲೈ 31 ರಿಂದ ಅಗಸ್ಟ್ 1 ರ ವರೆಗೂ ಚಿಕ್ಕಮಗ ಳೂರು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಧಾರಾಕಾರ ಮಳೆ ಹಿನ್ನೆಲೆ ಚಿಕ್ಕಮಗಳೂರು, ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ, N.R.ಪುರ ತಾಲೂಕಿನ ಶಾಲಾ-ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿ ಜಿಲ್ಲಾಧಿ ಕಾರಿ ಮೀನಾ ನಾಗರಾಜ್ ಆದೇಶಿಸಿದ್ದಾರೆ.
ಜೊತೆಗೆ ಜುಲೈ 31 ರಿಂದ ಅಗಸ್ಟ್ 1 ರ ವರೆಗೂ ಚಿಕ್ಕಮಗಳೂರು ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಿಸಲಾಗಿದೆ.ಶಿವಮೊಗ್ಗ ಜಿಲ್ಲೆಯ ಮೂರು ತಾಲೂಕಿನ ಶಾಲಾ-ಕಾಲೇಜುಗಳಿಗೆ ರಜೆ ನೀಡ ಲಾಗಿದೆ. ಜಿಲ್ಲೆಯ ಮಲೆನಾಡು ಭಾಗದಲ್ಲಿ ಮಳೆಯ ಅಬ್ಬರ ಜೋರಾದ ಹಿನ್ನಲೆ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಜಿಲ್ಲೆಯ ಮೂರು ತಾಲೂಕಿನ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿ ತಹಶೀಲ್ದಾರ್ಗಳು ಆದೇಶಿಸಿದ್ದಾರೆ.
ತೀರ್ಥಹಳ್ಳಿ ತಾಲೂಕಿನಲ್ಲಿ ಧಾರಾಕಾರ ಮಳೆ ಹಿನ್ನೆಲೆ ತಹಶೀಲ್ದಾರ್ ಜಕ್ಕನಗೌಡರ್ ರಜೆ ಘೋಷಣೆ ಮಾಡಿದ್ದಾರೆ. ಇತ್ತ ಹೊಸನಗರ ತಹಶೀಲ್ದಾರ್ ರಶ್ಮಿ ಹಾಲೇಶ್ ಕೂಡ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಿಸಿದ್ದು, ಸಾಗರ ತಾಲೂಕಿನ ಶಾಲಾ ಕಾಲೇಜುಗಳಿಗೂ ರಜೆ ಘೋಷಿಸಲಾಗಿದೆ.
ಕೊಡಗಿನಲ್ಲಿ ಮುಂದಿನ 2 ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಜಿಲ್ಲೆಯ ಎಲ್ಲಾ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ ರಾಜ್ಯದ ಹಲವೆಡೆ ಗುಡ್ಡಕುಸಿತ ಪ್ರಕರಣಗಳು ನಡೆಯುತ್ತಿದ್ದಂತೆ ಎಚ್ಚೆತ್ತ ಕೊಡಗು ಜಿಲ್ಲಾಡಳಿತ ಜಿಲ್ಲೆಯಲ್ಲಿ ಮುಂದಿನ 2 ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ
ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ರಜೆ ಘೋಷಣೆ ಹೌದು ದಕ್ಷಿಣ ಕನ್ನಡ ಜಿಲ್ಲೆ ಯಾದ್ಯಂತ ವ್ಯಾಪಕ ಮಳೆ ಆಗುತ್ತಿರುವ ಹಿನ್ನಲೆ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ (ಜು.31) ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲೈ ಮುಗಿಲನ್ ಆದೇಶ ಮಾಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..