ಬೆಂಗಳೂರು –
ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ – ರಜೆ ಘೋಷಣೆ ಮಾಡಿದ ಜಿಲ್ಲಾಧಿಕಾರಿಗಳು…..ಎಲ್ಲೆಲ್ಲಿ ಶಾಲೆಗಳಿಗೆ ರಜೆ ಘೋಷಣೆ ಇದೆ ನೋಡಿ…..
ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ರಾಜ್ಯದ ಹಲವು ಜಿಲ್ಲೆಗಳಲ್ಲಿ ಶನಿವಾರ ಶಾಲಾ ಕಾಲೇಜುಗಳಿಗೆ ರಜೆಯನ್ನು ಘೋಷಣೆ ಮಾಡ ಲಾಗಿದೆ.ಹೌದು ಉತ್ತರ ಕನ್ನಡದ 4 ಉಡುಪಿ 2 ತಾಲೂಕುಗಳಲ್ಲಿ ಜೂನ್ 6 ರಂದು ಶಾಲಾ-ಕಾಲೇಜಿಗಳಿಗೆ ರಜೆಯನ್ನು ಘೋಷಣೆ ಮಾಡ ಲಾಗಿದೆ.ಉತ್ತರ ಕರ್ನಾಟಕದಲ್ಲಿ ಭಾರೀ ಮಳೆ ಅಬ್ಬರ ಹಿನ್ನೆಲೆಯಲ್ಲಿ ಜುಲೈ 6 ರಂದು ಜಿಲ್ಲೆಯ ಕೆಲ ತಾಲೂಕಿನ ಶಾಲೆಗಳಿಗೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ್ ಅವರು ರಜೆ ಘೋಷಣೆ ಮಾಡಿ ಆದೇಶ ಹೊರಡಿಸಿದ್ದಾರೆ.
ಪದವಿ ಕಾಲೇಜು ಹೊರತುಪಡಿಸಿ ಉಳಿದ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಿಸಲಾಗಿದೆ.ಇನ್ನು ಉಡುಪಿ ಜಿಲ್ಲೆಯ ಎರಡು ತಾಲೂಕುಗಳಲ್ಲೂ ಸಹ ರಜೆ ಘೋಷಣೆ ಮಾಡಲಾಗಿದೆ.ಉತ್ತರ ಕನ್ನಡ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಪ್ರಮಾಣದಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಹಲವೆಡೆ ರಸ್ತೆ, ತಗ್ಗು ಪ್ರದೇಶ ಗಳಿಗೆ ನೀರು ನುಗ್ಗಿ ಅವಾಂತರವೇ ಸೃಷ್ಟಿಯಾಗಿದೆ
ಈ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಟಿಯಿಂದ ಜಿಲ್ಲೆಯ ನಾಲ್ಕು ತಾಲೂಕಿನಲ್ಲಿ ಶಾಲಾ,ಕಾಲೇಜುಗಳಿಗೆ ರಜೆ ಘೋಷಣೆ ಮಾಡ ಲಾಗಿದೆ.ಕಾರವಾರ,ಕುಮಟಾ,ಭಟ್ಕಳ,ಹೊನ್ನಾವರ ತಾಲೂಕಿನ ಶಾಲಾ- ಕಾಲೇಜುಗಳಿಗೆ ರಜೆ ನೀಡಿ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಆದೇಶ ಹೊರಡಿಸಿದ್ದಾರೆ.
ಶಿರಸಿ, ಸಿದ್ದಾಪುರ ಹಾಗೂ ಮುಂಡಗೋಡ ತಾಲೂಕಿನಲ್ಲಿ ಶಾಲಾ ಕಾಲೇಜ್ ಗಳು ಎಂದಿನಂತೆ ನಡೆಯಲಿವೆ.ಇತ್ತ ಉಡುಪಿ ಜಿಲ್ಲೆಯಲ್ಲಿ ಎರಡು ತಾಲೂಕುಗಳಲ್ಲಿ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.ಕುಂದಾಪುರ, ಬ್ರಹ್ಮಾವರ ತಾಲೂಕಿನ ಶಾಲೆ ಹಾಗೂ ಪದವಿಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಆದ್ರೆ, ಪದವಿ, ಸ್ನಾತಕೋತ್ತರ ಪದವಿ, ಐಟಿಐ, ಇಂಜಿನಿಯರಿಂಗ್ ಮುಂತಾದ ವಿದ್ಯಾರ್ಥಿಗಳಿಗೆ ರಜೆ ಇರುವುದಿಲ್ಲ ಎಂದು ಕುಂದಾಪುರ ಉಪ ವಿಭಾಗ ಸಹಾಯಕ ಆಯುಕ್ತೆ ರಶ್ಮಿ ಆದೇಶ ಆದೇಶ ಹೊರಡಿಸಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..