ಗೃಹ ಸಚಿವ ಬಸವರಾಜ ಬೊಮ್ಮಾಯಿ ಪ್ರವಾಸ –ಎರಡು ದಿನಗಳ ಹಾವೇರಿ ಧಾರವಾಡ ಜಿಲ್ಲಾ ಪ್ರವಾಸ

Suddi Sante Desk

ಬೆಂಗಳೂರು –

ಗೃಹ ಸಚಿವ ಬಸವರಾಜ ಬೊಮ್ಮಾಯಿ ಎರಡು ದಿನಗಳ ಹಾವೇರಿ ಮತ್ತು ಧಾರವಾಡ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಡಿಸೆಂಬರ್ 14 ರಂದು ಬೆಂಗಳೂರಿನಿಂದ ರಸ್ತೆ ಮೂಲಕ ಹಾವೇರಿ ಆಗಮಿಸಲಿದ್ದಾರೆ.

ಮಧ್ಯಾಹ್ನ ಹಾವೇರಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ವೈಧ್ಯಕೀಯ ಮಹಾವಿದ್ಯಾಲಯ ಕುರಿತು ಸಭೆಯಲ್ಲಿ ಪಾಲ್ಗೊಳ್ಳುವರು.ನಂತರ ಹಾವೇರಿಯಿಂದ ರಸ್ತೆ ಮೂಲಕ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ. ಡಿಸೆಂಬರ್ 15 ರಂದು ರಸ್ತೆ ಮೂಲಕ ಶಿಗ್ಗಾವಿಗೆ ಆಗಮಿಸಿ ಪುರಸಭೆ ಏರ್ಪಡಿಸಿರುವ ವಿವಿಧ ಅಭಿವೃದ್ದಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ಹಾಗೇ ಬಂಕಾಪೂರದಲ್ಲೂ ಪುರಸಭೆ ಏರ್ಪಡಿಸಿರುವ ವಿವಿಧ ಅಭಿವೃದ್ದಿ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವರು.

ಅಂದೇ ಹುಬ್ಬಳ್ಳಿಯಲ್ಲಿ ವಾಸ್ತವ್ಯ ಮಾಡಲಿದ್ದಾರೆ ಎಂದು ಗೃಹ ಸಚಿವರ ವಿಶೇಷಾಧಿಕಾರಿ ದೇವರಾಜ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.