ಬೆಂಗಳೂರು –
6ನೇ ರಾಜ್ಯ ವೇತನ ಆಯೋಗದ ಶಿಫಾರಸ್ಸುಗಳನ್ನು ಪರಿಶೀಲಿಸಲು ರಚಿಸಿದ ಸಮಿತಿಯು ನೀಡಿದ ವರದಿಯನ್ನು ಪರಿಶೀಲಿಸಿದಾಗ 05 ವಿವಿಧ ವೃಂದದ ಪೊಲೀಸ್ ಅಧಿಕಾರಿಗಳ, ಸಿಬ್ಬಂದಿಗಳ ವೇತನವನ್ನು ಪರಿಷ್ಕರಿಸಲಾಗಿದೆ, ಇನ್ನೂಳಿದ 04 ವೃಂದದ ಅಧಿಕಾರಿ ಸಿಬ್ಬಂದಿಗಳ ವೇತನ ಪರಿಷ್ಕರಿಸುವ ಕುರಿತು ಸರ್ಕಾರದ ಹಂತದಲ್ಲಿ ಪರಿಶೀಲನೆಯಲ್ಲಿರುತ್ತದೆ ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ ವಿಧಾನಸಭೆಯಲ್ಲಿ ತಿಳಿಸಿದರು.

ರಾಜ್ಯದಲ್ಲಿ ಕಾರ್ಯನಿರ್ವಹಿಸುತ್ತಿರುವ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ವಿವಿಧ ಸವಲತ್ತುಗಳನ್ನು ವಿಸ್ತರಿಸುವ ಸಂಬಂಧ ನೀಡಿರುವ ಔರಾದ್ಕರ್ ವರದಿಯ ಜಾರಿಗಾಗಿ ಸರ್ಕಾರ ಕೈಗೊಂಡಿರುವ ಕ್ರಮಗಳ ಬಗ್ಗೆ ಶಾಸಕ ಮಹೇಶ್ ಕೇಳಿದ ಪ್ರಶ್ನೆಗೆ ಸಚಿವರು ಮಾತನಾಡಿ ರಾಜ್ಯದಲ್ಲಿ ಒಟ್ಟು 89,333 ವಿವಿಧ ವೃಂದದ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ಪೋಲಿಸರ ಸಮವಸ್ತ್ರ ಭತ್ಯೆ, ಸಾರಿಗೆ ಭತ್ಯೆ, ಕಷ್ಟ ಪರಿಹಾರ ಭತ್ಯೆಗಳನ್ನು ಈಗಾಗಲೇ ಮಂಜೂರು ಮಾಡಿ ಆದೇಶ ಹೊರಡಿಸಿದೆ. ಒಟ್ಟಾರಿಯಾಗಿ ಸದರಿ ಸಮಿತಿಯ ಶಿಫಾರಸ್ಸುಗಳ ಅನುಷ್ಠಾನದಿಂದ ಪೊಲೀಸ್ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 84,733 ಅಧಿಕಾರಿ ಮತ್ತು ಸಿಬ್ಬಂದಿಯವರುಗಳಿಗೆ ಅನುಕೂಲವಾಗಿರುತ್ತದೆ. ಎಂದು ಸಚಿವರು ಸದನದಲ್ಲಿ ತಿಳಿಸಿದರು.