ಕಲಘಟಗಿ –
ಕಲಘಟಗಿ ತಾಲ್ಲೂಕಿನ ಗ್ರಾಮ ಪಂಚಾಯತಗೆ ನೂತನವಾಗಿ ಆಯ್ಕೆಯಾದ ಗ್ರಾಮ ಪಂಚಾಯತನ ಸದಸ್ಯರಿಗೆ ಅಭಿನಂದನಾ ಕಾರ್ಯಕ್ರಮವನ್ನು ನಾಳೆ ಜನೇವರಿ 10 ರಂದು ಹಮ್ಮಿಕೊಳ್ಳಲಾಗಿದೆ. ಕಲಘಟಗಿ ತಾಲ್ಲೂಕಿನ ಮಡಕಿಹೊನ್ನಳ್ಳಿ ಗ್ರಾಮದಲ್ಲಿ ಬ್ಲಾಕ್ ಕಾಂಗ್ರೇಸ್ ಪಕ್ಷದಿಂದ ಈ ಒಂದು ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಸಾಯಂಕಾಲ 4-00 ಘಂಟೆಗೆ ಮಡಕಿ ಹೊನ್ನಳ್ಳಿಯಲ್ಲಿರುವ ಅಮೃತ ನಿವಾಸದಲ್ಲಿ ಮಾಜಿ ಸಚಿವರಾದ ಸಂತೋಷ ಎಸ್ ಲಾಡ್ ಅವರ ನೇತೃತ್ವದಲ್ಲಿ ನೂತನವಾಗಿ ಆಯ್ಕೆಯಾದ ಕಲಘಟಗಿ ವಿಧಾನಸಭಾ ಕ್ಷೇತ್ರದ ಕಲಘಟಗಿ ಬ್ಲಾಕ್ ನಲ್ಲಿ ಬರುವಂತಹ 27 ಗ್ರಾಮ ಪಂಚಾಯಿತಿಯ ನೂತನ ಸದಸ್ಯರಿಗೆ ಸನ್ಮಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ.

ಈ ಒಂದು ಕಾರ್ಯಕ್ರಮದಲ್ಲಿ ಮಾಜಿ ಸಚಿವರಾದ ಸಂತೋಷ ಲಾಡ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಹಿರಿಯ ಧುರೀಣರು , ಜಿಪಂ , ತಾಪಂ ,ಪ.ಪಂ. ಗ್ರಾಪಂ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಹಾಗೂ ಮಾಜಿ ಪ್ರತಿನಿದಿಗಳು, ಕಾಂಗ್ರೆಸ್ ಪಕ್ಷದ ಮುಂಚೂಣಿ ಘಟಕಗಳ ಅಧ್ಯಕ್ಷರು ಪದಾಧಿಕಾರಿಗಳು ಸದಸ್ಯರು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ ಎಂದರು.