ಹುಬ್ಬಳ್ಳಿಯಲ್ಲಿ ಭೀಕರ ರಸ್ತೆ ಅಪಘಾತ – ಬಸ್ ಕಾರು ನಡುವೆ ಡಿಕ್ಕಿ ಸ್ಥಳದಲ್ಲೇ ಒರ್ವ ಸಾವು…..

Suddi Sante Desk

ಹುಬ್ಬಳ್ಳಿ –

ಹುಬ್ಬಳ್ಳಿಯ ಹೊರವಲಯದ ತಾರಿಹಾಳ ಬೈಪಾಸ್ ಬಳಿ‌ ಭೀಕರ ರಸ್ತೆ ಅಪಘಾತ ಸಂಭವಿಸಿದೆ.ಹೌದು ಖಾಸಗಿ ಬಸ್ ಹಾಗೂ ಕಾರು ನಡುವೆ ಡಿಕ್ಕಿಯಾಗಿದ್ದು ಸ್ಥಳದಲ್ಲಿಯೇ ಕಾರಿನ ಚಾಲಕ ಸಾವಿಗೀಡಾಗಿದ್ದು ಐವರಿಗೆ ಗಂಭೀರ ಗಾಯಗಳಾಗಿವೆ.

ಗಾಯಾಳುಗಳನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.ಮುಂಬಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ ಹುಬ್ಬಳ್ಳಿಯಿಂದ‌ ಬೆಳಗಾವಿಗೆ ತೆರಳುತ್ತಿತ್ತು ಕಾರು.

ಕಾರಿನಲ್ಲಿದ್ದವರಿಗೆ ಗಂಭೀರ ಗಾಯಗಳಾಗಿದ್ದು ಸುದ್ದಿ ತಿಳಿದ ಹುಬ್ಬಳ್ಳಿಯ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ಮಾಡಿ ದೂರನ್ನು ದಾಖಲು ಮಾಡಿಕೊಂಡಿದ್ದು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.