ನವದೆಹಲಿ –
ದಿನದಿಂದ ದಿನಕ್ಕೆ ಏರಿಕೆಯಾಗುತ್ತಿರುವ ಪೆಟ್ರೋಲ್ ಮತ್ತು ಡಿಸೇಲ್ ಬೆಲೆ ಏರಿಕೆ ಬೆನ್ನಲ್ಲೇ ಇತ್ತ ಅಡುಗೆ ಅನಿಲ ಸಿಲಿಂಡರ್ ಎಲ್ ಪಿಜಿ ಅಡುಗೆ ಅನಿಲ ದರ ಏರಿಕೆಯಾಗಿ ಇಂದು ಮಧ್ಯರಾತ್ರಿಯಿಂದ ಪರಿಷ್ಕೃತ ದರ ಜಾರಿಗೆ ಬಂದಿದೆ.14.2 ಕೆಜಿ ಸಿಲಿಂಡರ್ ದರ 50 ರೂಪಾಯಿ ಏರಿಕೆ ಮಾಡಲಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಪ್ರತಿ ಸಿಲಿಂಡರ್ ದರ 769 ರೂಪಾಯಿ ಆಗಿದೆ.
ಸಬ್ಸಿಡಿ ರಹಿತ ಎಲ್ ಪಿ ಜಿ ಸಿಲಿಂಡರ್ ದರವನ್ನು ಸಾಮಾನ್ಯವಾಗಿ ತಿಂಗಳಿಗೊಮ್ಮೆ ಏರಿಕೆ ಮಾಡಲಾ ಗುತ್ತದೆ. ಸ್ಥಳೀಯ ತೆರಿಗೆ ಆಧಾರದಲ್ಲಿ ದೇಶಾದ್ಯಂತ ಎಲ್ ಪಿಜಿ ದರ ವ್ಯತ್ಯಯವಾಗಲಿದೆ. ಫೆ. 4 ರಂದು ಸಬ್ಸಿಡಿ ರಹಿತ ಸಿಲಿಂಡರ್ ದರವನ್ನು 25 ರೂಪಾಯಿಗಳನ್ನು ಏರಿಕೆ ಮಾಡಲಾಗಿತ್ತು. ಸರ್ಕಾರ ಪ್ರತಿ ವರ್ಷ 12 ಸಬ್ಸಿಡಿ ಸಹಿತ ಸಿಲಿಂಡರ್ ಗಳನ್ನು ನೀಡಲಿದೆ.