ಬೆಂಗಳೂರು –
ರಾಷ್ಟ್ರೀಯ ಪಿಂಚಣಿ ಯೋಜನೆ ಏನು ಈ ಒಂದು ಯೋಜನೆ ಕುರಿತು ನೊಡೊದಾದರೆ ರಾಷ್ಟ್ರೀಯ ಪಿಂಚಣಿ ಯೋಜನೆ(ಎನ್‌ಪಿಎಸ್)ಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದೆ. ರಾಜ್ಯದಲ್ಲಿ ರಾಷ್ಟ್ರೀಯ ಪಿಂಚಣಿ ಯೋಜನೆಯಡಿ ಸುಮಾರು 2.78 ಲಕ್ಷ ಉದ್ಯೋಗಿಗಳು ಇದ್ದಾರೆ.
ಆದರೆ, ಸರ್ಕಾರಿ-ಅನುದಾನಿತ ಸಂಸ್ಥೆಗಳು, ಸ್ವಾಯತ್ತ ಸಂಸ್ಥೆಗಳು, ಮಂಡಳಿಗಳು ಮತ್ತು ನಿಗಮಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ರಾಷ್ಟ್ರೀಯ ಪಿಂಚಣಿ ಯೋಜನೆ ಯನ್ನು ವಿರೋಧಿಸಿದ್ದು ಹಳೆ ಪಿಂಚಣಿ ಯೋಜನೆ ಮರುಜಾರಿಗೆ ಒತ್ತಾಯಿಸುತ್ತಿದ್ದಾರೆ.
ಈಗಾಗಲೇ ರಾಜಸ್ಥಾನ, ಪಂಜಾಬ್, ಛತ್ತೀಸಗಢ, ಹಿಮಾಚಲ ಪ್ರದೇಶ ಸೇರಿದಂತೆ ಹಲವು ರಾಜ್ಯಗಳು ಎನ್‌ಪಿಎಸ್‌ನಿಂದ ನಿರ್ಗಮಿಸಿ ಒಪಿಎಸ್‌ಗೆ ಮರಳಿವೆ. 2023 ರ ವಿಧಾನಸಭೆ ಚುನಾವಣೆ ಅವಧಿಯಲ್ಲಿ ಒಪಿಎಸ್ ಮರ ಜಾರಿಗೊಳಿಸುವ ಕುರಿತು ಕಾಂಗ್ರೆಸ್ ಭರವಸೆ ನೀಡಿತ್ತು.ಇದರ ಪರಿಶೀಲನೆಗೆ ಗ್ರಾಮೀಣಾ ಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಂಜುಮ್ ಪರ್ವೇಜ್ ನೇತೃತ್ವ ದಲ್ಲಿ ಸಮಿತಿಯನ್ನೂ ರಚಿಸಲಾಗಿದೆ.ಏಕೀಕೃತ ಪಿಂಚಣಿ ಯೋಜನೆ ಬಗ್ಗೆ ತಿಳಿಯುವುದಾದರೆ
ಕೇಂದ್ರ ಸರ್ಕಾರ ರಾಷ್ಟ್ರೀಯ ಪಿಂಚಣಿ ಯೋಜನೆ ಪರಿಷ್ಕರಿಸಿ ಏಕೀಕೃತ ಪಿಂಚಣಿ ಯೋಜನೆ (ಯುಪಿಎಸ್) ಅನುಷ್ಠಾನಗೊಳಿಸಿದೆ. ಇದು 2025 ಏ.1 ರಿಂದ ಜಾರಿಗೆ ಬರಲಿದೆ. ಈ ಯೋಜನೆಯಡಿ ನಿವೃತ್ತಿಯ ನಂತರ ಕನಿಷ್ಠ ಪಿಂಚಣಿ ಸಿಗಲಿದೆ. ಆದರೆ, ಕೇಂದ್ರ ಸರ್ಕಾರದ ಯುಪಿಎಸ್ ಯೋಜನೆಗೆ ಕರ್ನಾಟಕ ಸೇರಿದಂತೆ ಹಲವು ರಾಜ್ಯಗಳ ಸರ್ಕಾರಿ ನೌಕರರು ವಿರೋಧ ವ್ಯಕ್ತಪಡಿಸಿದ್ದು, ಪರಿಶೀಲನೆಗಾಗಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ನೇತೃತ್ವದಲ್ಲಿ ಸಮಿತಿ ರಚಿಸಿದ್ದು ಏನೇನಾ ಗಲಿದೆ ಎಂಬೊಂದನ್ನು ಕಾದು ನೋಡಬೇಕಿದೆ.