ಧಾರವಾಡ –
ಜಿಲ್ಲೆಯಲ್ಲಿ ಬಸ್ ಸಂಚಾರ ಆರಂಭ ದ ಕಂಪ್ಲೀಟ್ ಮಾಹಿತಿ
ಕೋವಿಡ್ ಮಾರ್ಗಸೂಚಿ ಪ್ರಕಾರ ಸುರಕ್ಷಿತ ಕ್ರಮಗಳ ಪಾಲನೆ
ಸರ್ಕಾರ ಲಾಕ್ ಡೌನ್ ನಿರ್ಬಂಧಗಳನ್ನು ಸಡಿಲಕೆ ಮಾಡಿ ಸಾರ್ವಜನಿಕ ಸಾರಿಗೆಗೆ ಅನುಮತಿ ನೀಡಿ ರುವ ಹಿನ್ನೆಲೆಯಲ್ಲಿ ಕೋವಿಡ್ ಮಾರ್ಗ ಸೂಚಿ ನಿರ್ದೇಶನಗಳ ಆದೇಶಗಳ ಪ್ರಕಾರ ಎಲ್ಲಾ ಸುರಕ್ಷಿತ ಕ್ರಮಗಳೊಂದಿಗೆ ಸೋಮವಾರ ಬೆಳಿಗ್ಗೆಯಿಂದ ಬಸ್ಸುಗಳ ಸಂಚಾರ ಆರಂಭಿಸಲಾಗುತ್ತದೆ ಎಂದು ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ರಾಮನಗೌಡರ ತಿಳಿಸಿದ್ದಾರೆ.

ಮೊದಲ ಹಂತದಲ್ಲಿ ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಹುಬ್ಬಳ್ಳಿಯ ಹೊಸೂರು ಬಸ್ ನಿಲ್ದಾಣ ಮತ್ತು ಗೋಕುಲ ರಸ್ತೆ ಬಸ್ ನಿಲ್ದಾಣ ನವಲಗುಂದ, ಅಣ್ಣಿಗೇರಿ,ಕಲಘಟಗಿ,ಕುಂದಗೋಳ ತಡಸ ಮತ್ತಿ ತರ ಪ್ರಮುಖ ಬಸ್ ನಿಲ್ದಾಣಗಳಿಂದ ಜಿಲ್ಲೆಯ ತಾಲೂಕು ಕೇಂದ್ರಗಳಿಗೆ ಮತ್ತು ಇತರ ಪ್ರಮುಖ ಸ್ಥಳಗಳಿಗೆ ಬಸ್ಸುಗಳು ಸಂಚರಿಸಲಿವೆ. ನೆರೆಯ ಜಿಲ್ಲೆಗಳಾದ ಗದಗ, ಇಲಕಲ್, ಬಾಗಲಕೋಟೆ, ವಿಜಯಪುರ, ಹಾವೇರಿ, ದಾವಣಗೆರೆ,ಶಿರಸಿ, ಬೆಳಗಾವಿ ಮತ್ತಿತರ ಸ್ಥಳಗಳಿಗೆ ಬಸ್ ಸಂಚಾರ ಆರಂಭಿಸಲಾಗುತ್ತದೆ. ಪ್ರಯಾಣಿಕರ ಪ್ರತಿಕ್ರಿಯೆ ಗಮನಿಸಿ ದೂರದ ಊರುಗಳಿಗೆ ವಿಸ್ತರಿಸಲು ಕ್ರಮ ವಹಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ
ಬಸ್ಸುಗಳು,ಡಿಪೋಗಳು ಮತ್ತು ಬಸ್ ನಿಲ್ದಾಣಗಳ ನ್ನು ಸ್ಯಾನಿಟೈಜೇಷನ್ ಮಾಡಲಾಗಿದೆ.ಲಸಿಕೆ ಪಡೆದು ಕೊಂಡಿರುವ ಸಿಬ್ಬಂದಿಗಳನ್ನು ಮಾತ್ರ ಕರ್ತವ್ಯಕ್ಕೆ ನಿಯೋಜಿಸಲಾಗುತ್ತದೆ.ಸಿಬ್ಬಂದಿಗಳಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.ವೈಯಕ್ತಿಕ ಬಳಕೆಗೆ ಸ್ಯಾನಿಟೈಸರ್ ನೀಡಲಾಗಿದೆ

ಬಸ್ಸುಗಳ ಒಟ್ಟು ಆಸನಗಳ ಸಾಮರ್ಥ್ಯದ ಶೇಕಡ 50 ರಷ್ಟು ಪ್ರಯಾಣಿಕರಿಗೆ ಮಾತ್ರ ಅವಕಾಶ ನೀಡ ಲಾಗುತ್ತದೆ.ನಿಂತು ಪ್ರಯಾಣಕ್ಕೆ ಅವಕಾಶವಿರುವು ದಿಲ್ಲ.ಬೆಳಿಗ್ಗೆಯಿಂದ ಸಂಜೆ 7 ಗಂಟೆಯವರೆಗೆ ಬಸ್ಸು ಗಳು ಸಂಚರಿಸಲಿವೆ. ಬಸ್ಸು ಮತ್ತು ಬಸ್ ನಿಲ್ದಾಣಗ ಳಲ್ಲಿ ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿ ದೆ. ಸಾಮಾಜಿಕ ಅಂತರ ಕಾಪಾಡುವ ಮೂಲಕ ಕೋವಿಡ್ ಮಾರ್ಗಸೂಚಿ ನಿರ್ದೇಶನಗಳ ಸಮರ್ಪ ಕ ಅನುಷ್ಠಾನಕ್ಕೆ ಸಾರ್ವಜನಿಕರು ಸಂಸ್ಥೆಯೊಂದಿಗೆ ಸಹಕರಿಸಲು ಅವರು ಮನವಿ ಮಾಡಿದ್ದಾರೆ.

ಹುಬ್ಬಳ್ಳಿ ಗ್ರಾಮಾಂತರ ವಿಭಾಗದಲ್ಲಿ ಒಟ್ಟು 2216 ನೌಕರರಿದ್ದಾರೆ. ಅವರಲ್ಲಿ 1500ಕ್ಕೂ ಹೆಚ್ಚು ಚಾಲಕರು- ನಿರ್ವಾಹಕರುಗಳಿದ್ದಾರೆ. ಅವರ ಪೈಕಿ ಶೇಕಡ 97ರಷ್ಟು ಮಂದಿ ಮೊದಲನೇ ಡೋಸ್ ಪಡೆದುಕೊಂಡಿದ್ದಾರೆ ಕೆಲವರು ಎರಡನೇ ಡೋಸ್ ಪಡೆದುಕೊಂಡಿದ್ದಾರೆ.ಇನ್ನುಳಿದವರು ಕೂಡಲೆ ಲಸಿಕೆ ಪಡೆದುಕೊಳ್ಳುವಂತೆ ಸೂಚನೆಗಳನ್ನು ನೀಡಲಾಗಿದೆ.
ಕೋವಿಡ್ ಪೂರ್ವದಲ್ಲಿ ಬಸ್ ಸಂಚಾರ:
ಹುಬ್ಬಳ್ಳಿ ಗ್ರಾಮಾಂತರ ವಿಭಾಗದಲ್ಲಿ 51 ಸಾಮಾನ್ಯ, ವೇಗದೂತ, ರಾಜಹಂಸ, ಸ್ಲೀಪರ್ ಮತ್ತು ವೋಲ್ವೋ ಸೇರಿ ಒಟ್ಟು 470 ಬಸ್ಸುಗಳಿವೆ. ಕೋವಿಡ್ ಪೂರ್ವದಲ್ಲಿ 156 ಸಾಮಾನ್ಯ,219 ವೇಗದೂತ,10 ರಾಜಹಂಸ,10 ವೋಲ್ವೊ, 10 ಎಸಿ ಸ್ಲೀಪರ್ ಮತ್ತು 14ನಾನ್ ಎಸಿ ಸ್ಲೀಪರ್ ಸಾರಿಗೆಗಳು ಸೇರಿ ನಿತ್ಯ 419 ಮಾರ್ಗಗಳಲ್ಲಿ ಸಂಚರಿಸುತ್ತಿದ್ದವು.1.35 ರಿಂದ 1.50 ಲಕ್ಷ.ಕಿ.ಮೀ. ಕ್ರಮಿಸುತ್ತಿದ್ದವು. ಒಂದು ಲಕ್ಷಕ್ಕೂ ಹೆಚ್ಚು ಜನರು ಪ್ರಯಾಣ ಮಾಡು ತ್ತಿದ್ದರು.ಸಂಸ್ಥೆಗೆ 45 ರಿಂದ 50 ಲಕ್ಷ ರೂ. ಗಳಷ್ಟು ಸಾರಿಗೆ ಆದಾಯ ಸಂಗ್ರಹವಾಗುತ್ತಿತ್ತು.
ಅಂತರ ರಾಜ್ಯ ಬಸ್ ಸಧ್ಯಕ್ಕಿಲ್ಲ
ಕೋವಿಡ್ ಪೂರ್ವದಲ್ಲಿ ಗೋವಾ, ಮಹಾರಾಷ್ಟ್ರ ಆಂದ್ರಪ್ರದೇಶ, ತೆಲಂಗಾಣ,ತಮಿಳುನಾಡು ಮುಂತಾದ ಅಂತರ ರಾಜ್ಯಗಳಿಗೆ ವೊಲ್ವೊ, ಸ್ಲೀಪರ,ರಾಜಹಂಸ ಮತ್ತು ವೇಗದೂತ ಸಾರಿಗೆಗಳು ಸೇರಿ ಹುಬ್ಬಳ್ಳಿ ಯಿಂದ 65 ಬಸ್ಸುಗಳು ನೆರೆಯ ರಾಜ್ಯಗಳಿಗೆ ಸಂಚರಿಸುತ್ತಿದ್ದವು. ಸರ್ಕಾರದ ಅನುಮತಿ ಬಂದ ನಂತರದಲ್ಲಿ ಈ ಬಸ್ಸುಗಳ ಸಂಚಾರ ಆರಂಭಿಸುವ ಬಗ್ಗೆ ತೀರ್ಮಾನಿಸಲಾಗು ತ್ತದೆ ಎಂದು ಮಾಹಿತಿ ನೀಡಿದ್ದಾರೆ.
ಹಳೇ ಬಸ್ ನಿಲ್ದಾಣ ಸ್ಥಳಾಂತರ
ಹಳೆ ಬಸ್ ನಿಲ್ದಾಣದ ಬಸ್ಸುಗಳ ಸ್ಥಳಾಂತರ
ಸ್ಮಾರ್ಟ್ ಸಿಟಿ ಯೋಜನೆ ಅಡಿಯಲ್ಲಿ ಹುಬ್ಬಳ್ಳಿ ಹಳೆ ಬಸ್ ನಿಲ್ದಾಣದ ಪುನರ್ ನಿರ್ಮಾಣ ಕಾಮಗಾರಿ ಯ ಪ್ರಯುಕ್ತ ಬಸ್ ನಿಲ್ದಾಣದ ಈಗಿರುವ ಕಟ್ಟಡ ವನ್ನು ತೆರವುಗೊಳಿಸುವ ಕೆಲಸ ಆರಂಭವಾಗಿದೆ. ಈ ಹಿನ್ನೆಲೆಯಲ್ಲಿ ಹಳೆ ಬಸ್ ನಿಲ್ದಾಣದಿಂದ ಗ್ರಾಮೀಣ ಪ್ರದೇಶಗಳಿಗರ ಸಂಚರಿಸುತ್ತಿದ್ದ ಎಲ್ಲಾ ಬಸ್ಸುಗಳನ್ನು ಹೊಸೂರು ಬಸ್ ನಿಲ್ದಾಣಕ್ಕೆ ಸ್ಥಳಾಂತರಿಸಲಾಗಿದೆ.
ಅದರಂತೆ ಕುಂದಗೋಳ, ಸಂಶಿ, ಶಿರಹಟ್ಟಿ, ಹುಲಗೂರ, ಕಲಘಟಗಿ, ತಡಸ, ನವಲಗುಂದ, ಅಣ್ಣಿಗೇರಿ ಮತ್ತಿತರ ಗ್ರಾಮೀಣ ಸ್ಥಳಗಳಿಗೆ ಹೋಗವ ಎಲ್ಲಾ ಬಸ್ಸುಗಳು ಹೊಸೂರು ಬಸ್ ನಿಲ್ದಾಣದಿಂದ ಹೊರಡುತ್ತವೆ.
ಮಂಜುನಾಥ ಬಡಿಗೇರ (ಸೌಂದರ್ಯ) ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ