ಹುಬ್ಬಳ್ಳಿ –
ಆಗಸ್ಟ್.31ರಂದು ಮಹಾನಗರ ಪಾಲಿಕೆಯ ಸಭಾಂಗಣ ಉದ್ಘಾಟನೆ.ಹೌದು ಹುಬ್ಬಳ್ಳಿ ಕೇಂದ್ರ ಕಚೇರಿಯಲ್ಲಿ ನಿರ್ಮಿಸಿದ ನವೀಕೃತ ಸಭಾಭವನ ಉದ್ಘಾಟನೆ ಕಾರ್ಯಕ್ರಮವನ್ನು ಆಗಸ್ಟ್ 31 ರಂದು ಬೆಳಿಗ್ಗೆ 10 ಗಂಟೆಗೆ ಪಾಲಿಕೆ ಕಛೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಕೇಂದ್ರ ಸಂಸದೀಯ ವ್ಯವಹಾರಗಳು ಕಲ್ಲಿದ್ದಲು ಮತ್ತು ಗಣಿ ಸಚಿವರಾದ ಪ್ರಹ್ಲಾದ ಜೋಶಿ, ವಿಧಾನ ಪರಿಷತ್ ಸಭಾಪತಿಗಳಾದ ಬಸವರಾಜ ಹೊರಟ್ಟಿ ಅವರ ಘನ ಉಪಸ್ಥಿತಿಯಲ್ಲಿ ಕಾರ್ಯ ಕ್ರಮ ನಡೆಯಲಿದೆ.
ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ರಾದ ಬಿ.ಎಸ್. ಸುರೇಶ, ವಿಧಾನ ಪರಿಷತ್ತಿನ ಮುಖ್ಯ ಸಚೇತಕರಾದ ಸಲೀಂ ಅಹ್ಮದ್ ವಿಶೇಷ ಅತಿಥಿಗಳಾಗಿ ಪಾಲ್ಗೊಳ್ಳುವರು.ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್. ಲಾಡ್ ಅವರು ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ವೀಣಾ ಚೇತನ ಭರದ್ವಾಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ.
ಚುನಾಯಿತ ಪ್ರತಿನಿಧಿಗಳು,ಉಪ ಮಹಾಪೌ ರರು,ಸಭಾ ನಾಯಕರು,ವಿರೋಧ ಪಕ್ಷದ ನಾಯಕರು ಹಾಗೂ ಪಾಲಿಕೆಯ ಸದಸ್ಯರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸಾರ್ವಜನಿಕ ಸಂಪರ್ಕಾಧಿಕಾರಿ ಎಸ್.ಸಿ. ಬೇವೂರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.ಇನ್ನೂ ಸರ್ವರಿಗೂ ಕಾರ್ಯಕ್ರಮ ಕ್ಕೆ ಆಮಂತ್ರಣ ವನ್ನು ಪಾಲಿಕೆಯ ಆಯುಕ್ತರಾದ ಡಾ ಈಶ್ವರ ಉಳ್ಳಾಗಡ್ಡಿ ಅವರು ನೀಡಿದ್ದಾರೆ.
ಸುದ್ದಿ ಸಂತೆ ನ್ಯೂಸ್ ಹುಬ್ಬಳ್ಳಿ…..