ಮಂಡ್ಯ –
ಹೌದು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮುಖ್ಯ ಮಂತ್ರಿ ಮಾತನಾಡುತ್ತಿರುವ ಸಮಯದಲ್ಲಿ ವೇದಿಕೆಯ ಮೇಲೆ ಬೇರೆಯವರೊಂದಿಗೆ ಮಾತ ನಾಡುತ್ತಿರುವ ಸಮಯದಲ್ಲಿ ಮುಖ್ಯಮಂತ್ರಿ ಅವರ ಕೆಂಗಣ್ಣಿಗೆ ಗುರಿಯಾಗಿದ್ದ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮಾನವೀಯತೆ ಕಾರ್ಯವೊಂದನ್ನ ಮಾಡಿದ್ದಾರೆ.ಹೌದು ಸಾಮಾನ್ಯವಾಗಿ ಅಪಘಾತ ದಂತಹ ಸಂದರ್ಭದಲ್ಲಿ ಗಾಯಾಳುಗಳನ್ನು ಆಸ್ಪತ್ರೆಗೆ ಸೇರಿಸುವವರ ಸಂಖ್ಯೆ ಕಡಿಮೆ
ಬದ ಲಾಗಿ ಮೊಬೈಲ್ ತೆಗೆದು ವೀಡಿಯೋ ರೆಕಾರ್ಡ್ ಮಾಡಿ ಸೋಷಿಯಲ್ ಮೀಡಿಯಾ ಗಳಲ್ಲಿ ಹಾಕುವವರೇ ಹೆಚ್ಚಾಗಿರುವ ಇಂದಿನ ದಿನದ ನಡುವೆಯೂ ತಾವು ತೆರಳುತ್ತಿದ್ದಂತ ಮಾರ್ಗದಲ್ಲಿ ಅಪಘಾತ ಉಂಟಾಗಿ ಚಿಕಿತ್ಸೆಗೆ ಕಾಯುತ್ತಿದ್ದ ಗಾಯಾಳುಗಳನ್ನು ಆಸ್ಪತ್ರೆಗೆ ಸಾಗಿಸಿ ಶಿಕ್ಷಣ ಸಚಿವ ಬಿ ಸಿ ನಾಗೇಶ್ ಮಾನವೀಯತೆ ಮೆರೆದಿದ್ದಾರೆ.ಮಂಡ್ಯ ಜಿಲ್ಲೆಯ ಕೆ.ಆರ್ ಪೇಟೆ ತಾಲೂಕಿನ ತ್ರಿವೇಣಿ ಸಂಗಮದಲ್ಲಿ ನಡೆಯು ತ್ತಿರುವ ಮಹಾಕುಂಭ ಮೇಳ ಕಾರ್ಯಕ್ರಮದಿಂದ ವಾಪಸ್ ಹೋಗುವಾಗ ರಸ್ತೆ ಅಪಘಾತದಲ್ಲಿ ಇಬ್ಬರು ಬಾಲಕರು ಗಾಯಗೊಂಡಿದ್ದು ಆಸ್ಪತ್ರೆಗೆ ತೆರಳಲು ಆಂಬ್ಯುಲೆನ್ಸ್ ಗಾಗಿ ಕಾಯುತ್ತಿದ್ದರು
ಅದೇ ಮಾರ್ಗದಲ್ಲಿ ತೆರಳುತ್ತಿದ್ದ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಸಚಿವರಾರ ಬಿ.ಸಿ. ನಾಗೇಶ್ ಅವರು ತಮ್ಮ ಭದ್ರತೆ ಕರ್ತವ್ಯದಲ್ಲಿದ್ದ ಪೊಲೀಸ್ ಎಸ್ಕಾರ್ಟ್ ವಾಹನದಲ್ಲಿ ಗಾಯಾಳು ಬಾಲಕ ರನ್ನು ಬೇಗ ಆಸ್ಪತ್ರೆಗೆ ಕರೆದೊಯ್ಯಲು ನೆರವಾದರು.
ಮಾರ್ಗ ಮಧ್ಯೆ ಆಂಬ್ಯುಲೆನ್ಸ್ ಬಂದ ಬಳಿಕ ಇಬ್ಬರು ಬಾಲಕರನ್ನು ಆಸ್ಪತ್ರೆಗೆ ಕಳುಹಿಸಿ ಸೂಕ್ತ ಚಿಕಿತ್ಸೆ ನೀಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು ಈ ಮೂಲಕ ಅಪಘಾತದಲ್ಲಿ ಗಾಯ ಗೊಂಡಿದ್ದಂತ ಬಾಲಕನಿಗೆ ಸೂಕ್ತ ಸಮಯದಲ್ಲಿ ಚಿಕಿತ್ಸೆ ನೀಡಿ ಪ್ರಾಣಾಪಾಯದಿಂದ ಪಾರಾಗೋ ದಕ್ಕೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ನೆರವಾಗಿದ್ದಾರೆ