ಕೊಳ್ಳೇಗಾಲ –
ಓದು ಅಂತಾ ಪೊಷಕರು ಬುದ್ದಿ ಮಾತು ಹೇಳಿದ್ದಕ್ಕೆ ಯುವತಿಯೊಬ್ಬಳು ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಕೊಳ್ಳೆಗಾಲದಲ್ಲಿ ನಡೆದಿದೆ. ಕೊಳ್ಳೆಗಾಲದ ಮೇಗಲದೊಡ್ಡಿ ಗ್ರಾಮದಲ್ಲಿ ದಿವ್ಯಾ ಯುವತಿಯೇ ಆತ್ಮಹತ್ಯೆಗೆ ಶರಣಾದವರಾಗಿದ್ದಾರೆ.
ಕಳೆದ ವರ್ಷ ಲಾಕ್ ಡೌನ್ ಇದ್ದುದರಿಂದ ಕಾಲೇಜಿಗೆ ಹೋಗದೇ ಕೂಲಿ ಕೆಲಸ ಮಾಡಿಕೊಂಡಿದ್ದಳು. ಈ ವರ್ಷ ಕಾಲೇಜು ಆರಂಭವಾದ ಮೇಲೆ ಓದಲು ಹೋಗು ಎಂದು ಪೋಷಕರ ಬಲವಂತ ಮಾಡಿ ಕಾಲೇಜಿಗೆ ಕಳುಹಿಸಿದರು. ಆದರೆ ಕಾಲೇಜಿಗೆ ಹೋಗಲು ಇಷ್ಟವಿಲ್ಲದೇ ಜಮೀನಿಗೆ ಬಳಸುವ ಕ್ರಿಮಿನಾಶಕವನ್ನು ಸೇವಿಸಿದ್ದಾಳೆ. ಈಕೆಯ ನರಳಾಟವನ್ನು ನೋಡಿದ ಪೋಷಕರು ತಕ್ಷಣ ಉಪವಿಭಾಗ ಸರ್ಕಾರಿ ಆಸ್ಪತ್ರೆಗೆ ಕರೆತರುವಾಗ ಮಾರ್ಗಮಧ್ಯೆ ಕೊನೆಯುಸಿರೆಳೆದಿದ್ದು ಇನ್ನೂ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು ಮುಂದಿನ ಕ್ರಮವನ್ನು ಕೈಗೊಂಡಿದ್ದಾರೆ.
ಈ ಸಂಬಂಧ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.