ಬೆಂಗಳೂರು –
ಮತ್ತೊಂದು ಹೋರಾಟದ ಎಚ್ಚರಿಕೆಯ ಸಂದೇಶ ವನ್ನು ರಾಜ್ಯದ ಸಾರಿಗೆ ನೌಕರರು ನೀಡಿದ್ದಾರೆ ಹೌದು ಕಳೆದ 38 ತಿಂಗಳಿನಿಂದ ಅರಿಯರ್ಸ್ ಬಾಕಿ ಹಣ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿ ಸದೆ ಹೋದರೆ ಮುಷ್ಕರ ಮಾಡಲಾಗುತ್ತದೆ ಎಂದು KSRTC ಮತ್ತು BMTC ಸಾರಿಗೆ ನೌಕರರು ಎಚ್ಚರಿಕೆ ನೀಡಿದ್ದಾರೆ
ಮುಷ್ಕರಕ್ಕೆ ಸಿದ್ಧರಾಗಿ ಎಂದು ಜಂಟಿ ಕ್ರಿಯಾ ಸಮಿತಿ ಮತ್ತೊಮ್ಮೆ ಸರ್ಕಾರಕ್ಕೆ ಎಚ್ಚರಿಕೆ ನೀಡಿದೆ. 2024 ಜನವರಿಯಿಂದ ನೌಕರರಿಗೆ ಸಂಬಳ ಹೆಚ್ಚಳ ಮಾಡ ಬೇಕಿತ್ತು ಆದರೆ ನವೆಂಬರ್ ತಿಂಗಳು ಬಂದರೂ ಇನ್ನೂ ಈ ಬಗ್ಗೆ ಸರ್ಕಾರ ತೀರ್ಮಾನ ಕೈಗೊಂಡಿಲ್ಲ. ನಿವೃತ್ತಿ ಹೊಂದಿದ ನೌಕರರಿಗೆ ಗ್ರಾಚ್ಯುಟಿ ಹಣ ಬಿಡುಗಡೆ ಮಾಡಿಲ್ಲ.
ಅರಿಯರ್ಸ್ ಹಣವೇ ಒಟ್ಟು 1750 ಕೋಟಿ ರುಪಾಯಿ ನೀಡಬೇಕಿದೆ. ಗ್ರಾಚ್ಯುಟಿ ಹಣ ಸುಮಾರು 399.29 ಕೋಟಿ ರುಪಾಯಿ ನೀಡಬೇಕಿದೆ. ಈ ಹಿನ್ನೆಲೆಯಲ್ಲಿ ಸಾರಿಗೆ ನೌಕರರು ಮತ್ತೊಮ್ಮೆ ಸಾರಿಗೆ ಮುಷ್ಕರಕ್ಕೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ.ಈ ಕುರಿ ತಂತೆ ಸಾರಿಗೆ ಮುಖಂಡ ಅನಂತ್ ಸುಬ್ಬರಾವ್ ಮಾತನಾಡಿ,ಕಾನೂನನ್ನು ಕೈಗೆ ತೆಗೆದುಕೊಳ್ಳಬೇಡಿ ಎಂದು ನಾವು ನೌಕರರಿಗೆ ಹೇಳಿದ್ದೇವೆ.
ನಮ್ಮ ಬೇಡಿಕೆಗಳನ್ನು ಈಡೇರಿಸುವವರೆಗೂ ನಮ್ಮ ಮುಷ್ಕರ ವಾಪಸ್ಸು ಪಡೆಯಲ್ಲ. ಇದು ಬಹಳ ಸ್ಪಷ್ಟ, ನೌಕರರು ಮುಷ್ಕರಕ್ಕೆ ಸಿದ್ಧರಾಗಿದ್ದಾರೆ. ನಾವು ಈಗ ಮುಷ್ಕರದ ದಿನಾಂಕ ಘೋಷಣೆ ಮಾಡುವುದಷ್ಟೇ ಬಾಕಿ. ಇಲ್ಲಿಯವರೆಗೆ ನಮಗೆ ಸರ್ಕಾರದಿಂದ ಯಾವುದೇ ಉತ್ತರ ಬಂದಿಲ್ಲ.
ನೌಕರರು ಈಗಾಗಲೇ ಮುಷ್ಕರಕ್ಕೆ ಸಿದ್ದರಾಗಿದ್ದಾರೆ. ನಾವು ದಿನಾಂಕ ಘೋಷಣೆ ಮಾಡುತ್ತೇವೆ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದು ಇತ್ತ ರಾಜ್ಯ ಸರ್ಕಾರ ದಿಂದ ಏನು ಉತ್ತರ ಬರಲಿದೆ ಎಂಬೊಂದನ್ನು ಕಾದು ನೌಕರರು ಹೋರಾಟಗಾರರು ಮುಂದಿನ ನಿರ್ಧಾರ ತೆಗೆದುಕೊಳ್ಳಲಿದ್ಸಾರೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..