ಬೆಂಗಳೂರು –
ರಾಜ್ಯ ಸರಕಾರವು ರಾಜ್ಯ ಸರಕಾರಿ ನೌಕರರಿಗೆ ಶೇ.30 ರಷ್ಟು ಮಧ್ಯಂತರ ಪರಿಹಾರ ಘೋಷಣೆ ಮಾಡದಿದ್ದರೆ ಹೋರಾಟ ನಡೆಸಲಾಗುವುದು ಎಂದು ಕರ್ನಾಟಕ ಸರಕಾರ ಸಚಿವಾಲಯದ ನೌಕರರ ಸಂಘದ ಎಚ್ಚರಿಕೆ ನೀಡಿದೆ.2023-24ರ ಬಜೆಟ್‍ನಲ್ಲಿ 7ನೆ ವೇತನ ಆಯೋಗದ ಜಾರಿ ಯಾಗಲಿ ರಾಜ್ಯ ಸರಕಾರಿ ನೌಕರರ ವೇತನ ಭತ್ಯೆ ಗಳ ಪರಿಷ್ಕರಣೆಯಾಗಲಿ ಮಧ್ಯಂತರ ಪರಿಹಾರ ಘೋಷಣೆ ಮಾಡುವ ಮತ್ತು ಎನ್‍ಪಿಎಸ್ ರದ್ದತಿ ಮಾಡುವ ಯಾವುದೇ ಕೆಲಸವನ್ನು ಮಾಡಿಲ್ಲ ಎಂದು ಸಂಘವು ಹೇಳಿದೆ
ಆಯವ್ಯಯದಲ್ಲಿ ನೌಕರರ ಬೇಡಿಕೆಯನ್ನು ಈಡೇರಿಸದೆ ಸಂಪೂರ್ಣವಾಗಿ ಕಡೆಗಣಿಸಿದೆ ಎಂದು ಸಂಘದ ಅಧ್ಯಕ್ಷ ಪಿ.ಗುರುಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ.ರಾಜ್ಯದಲ್ಲಿ ಸದ್ಯ 2,58,709 ಹುದ್ದೆಗಳು ಖಾಲಿ ಇದ್ದಾಗ್ಯೂ ಕೂಡ ರಾಜ್ಯದ ಸರ್ವತೋಮುಖ ಅಭಿವೃದ್ಧಿಗಾಗಿ ರಾಜ್ಯ ಸರಕಾರಿ ನೌಕರರು ಹಗಲಿರುಳು ದಕ್ಷತೆಯಿಂದ ಶ್ರಮವಹಿಸಿ ಸೇವೆ ಸಲ್ಲಿಸಿ ದೇಶದಲ್ಲಿಯೇ ರಾಜಸ್ವ ಸಂಗ್ರಹಣೆಯಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿ ರಲು ಕಾರಣೀಭೂತರಾಗಿದ್ದಾರೆ ಎಂದರು.
ಸರಕಾರ ನೌಕರರ ವೇತನ ಭತ್ಯೆ ಪರಿಷ್ಕರಣೆಯ ಬಹುದಿನಗಳ ಬೇಡಿಕೆಯನ್ನು ಈಡೇರಿಸದೆ ಅನ್ಯಾಯ ಎಸಗುವುದನ್ನು ಸಂಘವು ತೀವ್ರವಾಗಿ ಖಂಡಿಸುತ್ತದೆ ಸರಕಾರಿ ನೌಕರರು ಎಚ್ಚೆತ್ತುಕೊಂ ಡು ಹೋರಾಟಕ್ಕೆ ಅಣಿಯಾಗುವಂತೆ ಪ್ರಕಟ ಣೆಯ ಮೂಲಕ ಕೋರಿದ್ದಾರೆ
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..