ಕೋಲಾರ –
ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಹುದ್ದೆಯಿಂದ ಮುಖ್ಯೋ ಪಾಧ್ಯಾಯರ ಹುದ್ದೆಗೆ ಬಡ್ತಿ ನೀಡಲು ಅರ್ಹ ಅಭ್ಯರ್ಥಿಗಳ ಜೇಷ್ಠತಾ ಪಟ್ಟಿಯನ್ನು 7 ದಿನದೊಳಗೆ ಪ್ರಕಟಿಸಿಕೌನ್ಸೆಲಿಂಗ್ ಪ್ರಕ್ರಿಯೆ ಪೂರ್ಣಗೊಳಿಸಬೇಕು ಎಂದು ಜಿಲ್ಲಾ ಪ್ರಾಥಮಿಕ ಶಿಕ್ಷಕರ ಸಂಘದ ಸದಸ್ಯರು ಡಿಡಿಪಿಐ ರೇವಣ ಸಿದ್ದಪ್ಪ ಅವರಿಗೆ ಮನವಿ ಸಲ್ಲಿಸಿದರು.2020-21ನೇ ಸಾಲಿನ ಶಿಕ್ಷಣ ಇಲಾಖೆ ಆಯುಕ್ತರ ಆದೇಶದಂತೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಪ್ರಾಥಮಿಕ ಶಾಲಾ ಸಹ ಶಿಕ್ಷಕರ ಹುದ್ದೆಯಿಂದ ಮುಖ್ಯ ಶಿಕ್ಷಕರಿಗೆ ಬಡ್ತಿ ಹಾಗೂ ಅರ್ಹ ಶಿಕ್ಷಕರಿಗೆ ಪ್ರೌಢ ಶಾಲಾ ಸಹ ಶಿಕ್ಷಕರಾಗಿ ಬಡ್ತಿ ನೀಡಲು ಜೇಷ್ಠತಾ ಪಟ್ಟಿ ಪ್ರಕಟಿಸಲಾಗಿದೆ.ಅಲ್ಲದೇ ಆಕ್ಷೇಪಣೆ ಸ್ವೀಕರಿಸಲಾಗಿದೆ. ಆದರೆ ಜಿಲ್ಲೆಯಲ್ಲಿ ವಿಳಂಬ ನೀತಿ ಅನುಸರಿಸಲಾಗುತ್ತಿದೆ’ ಎಂದು ಸಂಘದ ಅಧ್ಯಕ್ಷ ಅಪ್ಪಯ್ಯಗೌಡ ದೂರಿದರು.

2019-20, 2020-21 ಹಾಗೂ 2021-22ನೇ ಸಾಲಿನಲ್ಲೂ ಜಿಲ್ಲೆಯಲ್ಲಿ ಬಡ್ತಿ ನೀಡದ ಕಾರಣ ಅರ್ಹರಾದ ಅನೇಕ ಶಿಕ್ಷಕರು ಬಡ್ತಿಯಿಂದ ವಂಚಿತರಾಗಿದ್ದಾರೆ.ಸಾವಿರಾರು ರೂಪಾಯಿ ಆರ್ಥಿಕ ನಷ್ಟ ಅನುಭವಿಸಿದ್ದಾರೆ.ಬಡ್ತಿ ಆಸೆ ಯಲ್ಲೇ ಹಲವರು ನಿವೃತ್ತಿ ಹೊಂದಿದ್ದಾರೆ ಎಂದರು.ಇನ್ನೂ ವಾರದೊಳಗೆ ಬಡ್ತಿ ಪ್ರಕ್ರಿಯೆ ಪೂರ್ಣಗೊಳಿಸದಿದ್ದರೆ ಡಿಡಿಪಿಐ ಕಚೇರಿ ಧರಣಿ ನಡೆಸುತ್ತೇವೆ.ಜೇಷ್ಠತಾ ಪಟ್ಟಿ ಯನ್ನು ಕಚೇರಿ ಸೂಚನಾ ಫಲಕದಲ್ಲಿ ಪ್ರಕಟಿಸಿ ಆಕ್ಷೇಪಣೆ ಸ್ವೀಕರಿಸಬೇಕು. ಮನವಿಗೆ ಸ್ಪಂದಿಸದಿದ್ದರೆ ನ್ಯಾಯಯುತ ಬೇಡಿಕೆಗಳ ಈಡೇರಿಕೆಗೆ ಹೋರಾಟದ ಹಾದಿ ಹಿಡಿಯು ವುದು ಅನಿವಾರ್ಯವಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದರು.ಈ ಒಂದು ಸಮಯದಲ್ಲಿ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಎಂ.ನಾಗರಾಜ್, ತಾಲ್ಲೂಕು ಘಟಕದ ಗೌರವಾಧ್ಯಕ್ಷ ಎಂ.ಎನ್. ಶ್ರೀನಿವಾಸ ಮೂರ್ತಿ,ಕಾರ್ಯಾಧ್ಯಕ್ಷ ಆರ್.ನಾಗರಾಜ್, ಸಂಘಟನಾ ಕಾರ್ಯದರ್ಶಿ ಬಿ.ಎಂ.ಸುರೇಂದ್ರ ಹಾಜರಿದ್ದರು.