ಹುಬ್ಬಳ್ಳಿ –
ಹುಬ್ಬಳ್ಳಿಯ APMC ಯಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಪತ್ತೆಯಾಗಿದೆ. ಏ.15 ರಂದು 11 ಗಂಟೆಗೆ ನಗರದ ಅಮರಗೋಳ ಎಪಿಎಂಸಿಯ ಹೂವಿನ ಮಾರುಕಟ್ಟೆಯಲ್ಲಿ ಅಪರಿಚಿತ ವ್ಯಕ್ತಿ ಅಸ್ವ ಸ್ಥಗೊಂಡು ಬಿದ್ದಿದ್ದರು. ಅವರನ್ನು ಚಿಕಿತ್ಸೆಗಾಗಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಿಸದೆ ಏ.19 ರಂದು ಸಂಜೆ 5:10 ಗಂಟೆಗೆ ಮೃತಪಟ್ಟಿದ್ದಾರೆ.

ಸುಮಾರು 45 ರಿಂದ 50 ವರ್ಷದ ಈ ಪುರುಷ ವ್ಯಕ್ತಿ ಗೋಧಿಗೆಂಪು ಮೈಬಣ್ಣ, ಕೋಲುಮುಖ, ಕಪ್ಪು ಬಿಳಿ ಮಿಶ್ರಿತ ಬಣ್ಣದ ಕೂದಲು, ಗಡ್ಡ ಮತ್ತು ಮೀಸೆ, ಮೈ ಮೇಲೆ ನೀಲಿ ಬಣ್ಣದ ಉದ್ದ ತೋಳಿನ ಶರ್ಟ್ ಮತ್ತು ಚಾಕಲೇಟ್ ಬಣ್ಣದ ಪ್ಯಾಂಟ್ ಧರಿಸಿರುತ್ತಾರೆ.

ಈ ಕುರಿತು ಹುಬ್ಬಳ್ಳಿ ಎಪಿಎಂಸಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಖರಣ ದಾಖಲಾಗಿದ್ದು ಪೋಲಿಸರು ತನಿಖೆ ನಡೆಸುತ್ತಿದ್ದಾರೆ. ಅಪರಿಚಿತ ಶವದ ಹೆಸರು, ವಿಳಾಸ ಹಾಗೂ ವಾರಸುದಾರರ ಬಗ್ಗೆ ಸುಳಿವು ಸಿಕ್ಕಲ್ಲಿ ಎಪಿಎಂಸಿ ನವನಗರ ಪೊಲೀಸ ಠಾಣೆ ದೂರವಾಣಿ ಸಂಖ್ಯೆ 0836- 2233492 ಅಥವಾ ಹು-ಧಾ ಕಂಟ್ರೋಲ್ ರೂಮ್ ದೂರವಾಣಿ ಸಂಖ್ಯೆ 0836-2233555-100 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆಯಲ್ಲಿ ಪೊಲೀಸರು ತಿಳಿಸಿದ್ದಾರೆ






















