ಬೆಂಗಳೂರು –
ಪ್ರತಿ ವರ್ಷದಕ್ಕಿಂತ ಈ ಬಾರಿ ಬೇಸಿಗೆ ರಜೆಯನ್ನು ಕಡಿತ ಮಾಡಿ ಹದಿನೈದು ದಿನಗಳ ಕಾಲ ಮುಂಚಿತವಾಗಿ ಶಾಲೆಗ ಳನ್ನು ಆರಂಭ ಮಾಡಲಾಗುತ್ತಿದ್ದು ಒಂದು ಕಡೆಗೆ
ಕೊರೊನಾ ವೈರಸ್ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷ ಗಳಲ್ಲಿ ವಿದ್ಯಾರ್ಥಿಗಳು ಎದುರಿಸುತ್ತಿರುವ ಕಲಿಕಾ ಕೊರತೆ ಸರಿದೂಗಿಸಲು ಈ ಬಾರಿ 15 ದಿನ ಮೊದಲೇ ಅಂದರೆ ಮೇ.16 ರಿಂದಲೇ ರಾಜ್ಯದಲ್ಲಿ ಶಾಲೆಗಳನ್ನು ಆರಂಭಿಸಲಾ ಗುತ್ತಿದ್ದು ಇದರೊಂದಿಗೆ ಕಲಿಕಾ ಚೇತರಿಕೆ ಕಾರ್ಯಕ್ರಮ ನಡೆಸಲು ಸಜ್ಜಾಗಿದೆ ಈ ಕುರಿತಂತೆ ಈಗಾಗಲೇ ಶಿಕ್ಷಣ ಇಲಾಖೆ ಎಲ್ಲಾ ರೀತಿಯಲ್ಲೂ ಸಿದ್ದತೆಯನ್ನು ಮಾಡಿಕೊಂ ಡಿದ್ದು ಇನ್ನೂ ಸಧ್ಯ ರಾಜ್ಯದಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿದ್ದು ಇದರಿಂದಾಗಿ ಶಾಲಾ ಮಕ್ಕಳಿಗೆ ವಿದ್ಯಾರ್ಥಿ ಗಳಿಗೆ ಸಮಸ್ಯೆಯಾಗಬಾರದೆಂಬ ಕಾರಣಕ್ಕಾಗಿ ವಿಧಾನ ಪರಿಷತ್ ಜೆಡಿಎಸ್ ಸದಸ್ಯ ಬೋಜೇಗೌಡ ಸೇರಿದಂತೆ ಕೆಲ ಮೇಲ್ಮನೆ ಸದಸ್ಯರು ಈ ಬಾರಿ ಬಿಸಿಲ ಬೇಗೆಯ ತಾಪಪಾನ ಹೆಚ್ಚಾಗಿದ್ದು ಶಾಲೆಗಳನ್ನು ಒಂದು ತಿಂಗಳು ಕಾಲ ವಿಸ್ತರಿಸು ವಂತೆ ಮನವಿ ಮಾಡಿದ್ದಾರೆ.ಇದರಿಂದ ವಿದ್ಯಾರ್ಥಿಗಳು ಹಾಗೂ ಪೋಷಕರಲ್ಲಿ ಗೊಂದಲ ಹುಟ್ಟುಹಾಕಿದೆ.ಇನ್ನೂ ಈ ಕುರಿತು ಸಚಿವರು ಮಾತನಾಡಿ ಶಾಲೆ ರಜೆ ವಿಸ್ತರಣೆ ಮಾಡ ಬೇಕು ಎಂಬ ಬಗ್ಗೆ ಕೆಲ ಶಾಸಕರು ಆಗ್ರಹ ಮಾಡಿದ್ದಾರೆ ಎಂಬ ಮಾಹಿತಿ ಬಂದಿದೆ.ಆದರೆ ಈ ಬಾರಿ ಕಲಿಕಾ ಚೇತರಿಕೆ ಕಾರ್ಯಕ್ರಮ ರೂಪಿಸಿ 15 ದಿನ ಮೊದಲೇ ಶಾಲೆ ಆರಂಭಿ ಸಲು ನಿರ್ಧರಿಸಲಾಗಿದ್ದು ಇದರಲ್ಲಿ ಯಾವುದೇ ಬದಲಾ ವಣೆ ಇಲ್ಲ ಎಂದು ತಿಳಿಸಿದ್ದಾರೆ.