ಬೆಂಗಳೂರು –
7ನೇ ವೇತನ ಆಯೋಗವನ್ನು ನೀಡಿ ರಾಜ್ಯದ ಸಮಸ್ತ ಸರ್ಕಾರಿ ನೌಕರರಿಗೆ CM ರಿಂದ ಮಹತ್ವದ ಸಂದೇಶ – ರಾಜ್ಯ ಸರ್ಕಾರಿ ನೌಕರರಿಗೆ ಮುಖ್ಯಮಂತ್ರಿ ಹೇಳಿದ್ದೇನು ಗೊತ್ತಾ……
ರಾಜ್ಯದ ಸಮಸ್ತ ಸರ್ಕಾರಿ ನೌಕರರಿಗೆ 7ನೇ ವೇತನ ಆಯೋಗವನ್ನು ನೀಡಿದ್ದಾರೆ.ಈ ಒಂದು ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜ್ಯದ ಸಮಸ್ತ ಸರ್ಕಾರಿ ನೌಕರರಿಗೆ ಮಹತ್ವದ ಸಂದೇಶ ವನ್ನು ನೀಡಿದ್ದಾರೆ.
ಬೆಂಗಳೂರಿನಲ್ಲಿ ಮಾತನಾಡಿದ ಅವರು ಸರಕಾರದ ನಿಲುವುಗಳಿಗೆ ತಕ್ಕಂತೆ ಕೆಲಸವನ್ನು ಮಾಡಿ ಸರಕಾರದ ಕಾರ್ಯಕ್ರಮಗಳನ್ನು ಪ್ರಾಮಾಣಿಕವಾಗಿ ಜನರಿಗೆ ತಲುಪಿಸುವ ಕಾರ್ಯ ಮಾಡಿ ಎಂದಿದ್ದಾರೆ.ಸರಕಾರಿ ನೌಕರರ ವೇತನ ಪರಿಷ್ಕರಣೆ ಕುರಿತಾಗಿ 7ನೇ ವೇತನ ಆಯೋಗದ ಶಿಫಾರಸುಗಳನ್ನು ಸರಕಾರ ಈಗಾಗಲೇ ಜಾರಿಗೆ ತಗೆದುಕೊಂಡು ಬಂದಿದ್ದು
ನಾವು ಯಾವಾಗಲೂ ಸರ್ಕಾರಿ ನೌಕರರ ಪರವಾಗಿ ಇಧ್ದೇವೆ.ಸರಕಾರದ ಯೋಜನೆಗಳನ್ನು ಸಮರ್ಪಕವಾಗಿ ಜನರಿಗೆ ತಲುಪಿಸುವ ಜತೆಗೆ ಸರಕಾರದ ನಿಲುವುಗಳಿಗೆ ತಕ್ಕಂತೆ ಕಾರ್ಯ ನಿರ್ವಹಿಸಬೇಕೆಂದು ಕಿವಿಮಾತು ಹೇಳಿದರು.
7ನೇ ವೇತನ ಆಯೋಗದ ಶಿಫಾರಸುಗಳನ್ನು ಸರ್ಕಾರ ಪೂರ್ಣವಾಗಿ ಒಪ್ಪಿಕೊಂಡಿದೆ. ಇದರಿಂದ ಸರಕಾರಕ್ಕೆ 20 ಸಾವಿರ ಕೋಟಿ ರೂ. ಹೆಚ್ಚಿನ ಹೊರೆಯಾಗಲಿದ್ದು ನೌಕರರಿಗೆ ಅನುಕೂಲವಾ ಗಲಿ ನೆಮ್ಮದಿಯಾಗಿ ಇರಲಿ ಎಂದರು.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..