ಬೆಂಗಳೂರು –
ವರ್ಗಾವಣೆಯ ನಿರೀಕ್ಷೆಯಲ್ಲಿರುವ ಶಿಕ್ಷಕರಿಗೆ ಶಿಕ್ಷಣ ಇಲಾಖೆ ಸಿಹಿಸುದ್ದಿ ನೀಡಿದ್ದು ಸೆಪ್ಟೆಂಬರ್ ನಲ್ಲಿ 2022-23 ನೇ ಸಾಲಿನ ಸಾಮಾನ್ಯ ವರ್ಗಾವಣೆಗೆ ಅನುಮತಿ ನೀಡಿದೆ.
ಪ್ರಸಕ್ತ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆಯನ್ನು ಸೆಪ್ಟೆಂಬರ್ ನಲ್ಲಿ ಪ್ರಾರಂಭಿಸಲು ಶಿಕ್ಷಣ ಇಲಾಖೆ ನಿರ್ಧರಿ ಸಿದ್ದು ಈ ಸಂಬಂಧ ಪೂರ್ವಭಾವಿಯಾಗಿ ಶಿಕ್ಷಕ ಮಿತ್ರ ತಂತ್ರಾಂಶದಲ್ಲಿ ಶಿಕ್ಷಕರ ಸೇವಾ ವಿವರಗಳನ್ನು ಪರಿಶೀಲಿಸಿ ನಿಖರ ಮಾಹಿತಿಯನ್ನು ಸೆ.2 ರೊಳಗೆ ಅಪ್ ಲೋಡ್ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದೆ.
ಇನ್ನೂ ಶಿಕ್ಷಕ ಮಿತ್ರದಲ್ಲಿ ಅಪ್ ಲೋಡ್ ಮಾಡುವ ವಿವರ ಗಳನ್ನು ಮಾತ್ರ ವರ್ಗಾವಣೆ ಪ್ರಕ್ರಿಯೆಗೆ ಪರಿಗಣಿಸಲಾಗು ತ್ತದೆ.ತಂತ್ರಾಂಶಕ್ಕೆ ಸಂಬಂಧಿಸಿದಂತೆ ಗೊಂದಲಗಳಿದ್ದಲ್ಲಿ ವಿವರಗಳನ್ನು
[email protected] ಗೆ ಸಲ್ಲಿಸಬಹುದು ಎಂದು ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.