ಬೆಂಗಳೂರು –
ಕರ್ನಾಟಕ ರಾಜ್ಯದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಪ್ರಾಥಮಿಕ ಮಹಿಳಾ ಶಿಕ್ಷಕರಿಗೆ ಶಿಶುಪಾಲನಾ ರಜೆಗೆ ಚೆಕ್ ಲಿಸ್ಟ್ ಬಗ್ಗೆ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.ಹೌದು ಸಾರ್ವಜನಿಕ ಶಿಕ್ಷಣ ಇಲಾಖೆ, ಬೆಂಗಳೂರು ಇವರ ಪ್ರಸ್ತಾವನೆ ಯಲ್ಲಿ, ಬುದ್ದಿ ಮಾಂದ್ಯ/ಅಂಗವಿಕಲ ಮಕ್ಕಳನ್ನು ನೋಡಿಕೊಳ್ಳಲು ರಾಜ್ಯ ಸರ್ಕಾರಿ ಮತ್ತು ನೌಕರರಿಗೆ ಶಿಶುಪಾಲನ ರಜೆಯನ್ನು ಈಗಾಗಲೇ ಸರ್ಕಾರವು ಮಂಜೂರು ಮಾಡಿದೆ.ಹಾಗೆಯೇ 2020-21ನೇ ಸಾಲಿನ ಆಯವ್ಯಯ ಭಾಷಣದ ಕಂಡಿಕೆ-37 ರಲ್ಲಿ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಚಾಲ್ತಿಯಲ್ಲಿರುವ ಪ್ರಸೂತಿ ರಜೆಯೊಂದಿಗೆ ಒಟ್ಟು ಸೇವಾವಧಿಯಲ್ಲಿ ಆರು ತಿಂಗಳವರೆಗೆ ಅಂದರೆ 180 ದಿನಗಳ ಶಿಶುಪಾಲನ ರಜೆಯನ್ನು ಸರ್ಕಾರಿ ಆದೇಶ ಸಂಖ್ಯೆ:ಆಇ 4(ಇ)ಸೇನಿಸೇ 2021 ಬೆಂಗಳೂರು, ದಿನಾಂಕ:21-06-2021 ಶಿಶುಪಾಲನ ರಜೆಯ ಮಂಜೂರು ಮಾಡಲಾಗಿರುತ್ತದೆ.
ರಾಜ್ಯದ ಎಲ್ಲಾ ಮಹಿಳಾ ನೌಕರರಿಗೆ ಸರ್ಕಾರದ ಆದೇಶ ಸಂಖ್ಯೆ ಆಇ 4(ಇ) ಸೇನಿಸೇ 2021 ಬೆಂಗಳೂರು, ದಿನಾಂಕ:21-06-2021 ಕರ್ನಾಟಕ ರಾಜ್ಯ ಸರ್ಕಾರಿ ಮಹಿಳಾ ನೌಕರರಿಗೆ ಕೆಲ ವೊಂದು ಷರತ್ತಿಗೊಳಪಟ್ಟು ಇಡೀ ಸೇವಾವಧಿಯಲ್ಲಿ ಗರಿಷ್ಟ 6 ತಿಂಗಳ ವರೆಗೆ ಅಂದರೆ 180 ದಿನಗಳ ಶಿಶುಪಾಲನಾ ರಜೆಯನ್ನು ಮಂಜೂರು ಮಾಡಲು ಅನುಮತಿಸಲಾಗಿದೆ.
ಬುದ್ದಿಮಾಂದ್ಯ ಅಂಗವಿಕಲ ಮಕ್ಕಳನ್ನು ಹೊಂದಿರುವ ಸರ್ಕಾರಿ ಮಹಿಳಾ ನೌಕರರಿಗೆ ಮಂಜೂರು ಮಾಡಿರುವ 730 ದಿನಗಳ ಶಿಶುಪಾಲನ ರಜೆ ಸೌಲಭ್ಯಕ್ಕೆ ಅರ್ಹರಾದ ಮಹಿಳಾ ಶಿಕ್ಷಕಿಯರು 180 ದಿನಗಳ ಶಿಶುಪಾಲನಾ ರಜೆಯ ಸೌಲಭ್ಯಕ್ಕೆ ಅರ್ಹರಾಗತ ಕ್ಕದ್ದಲ್ಲ. ಬುದ್ದಿಮಾಂದ್ಯ/ಅಂಗವಿಕಲ ಮಕ್ಕಳನ್ನು ಹೊಂದಿದ್ದು, 730 ದಿನಗಳ ಶಿಶುಪಾಲನ ರಜೆ ಸೌಲಭ್ಯಕ್ಕೆ ಅರ್ಹರಾದ ಮಹಿಳಾ ಶಿಕ್ಷಕಿಯರನ್ನು ಹೊರತುಪಡಿಸಿ ಉಳಿದ ರಾಜ್ಯದ ಎಲ್ಲಾ ಅರ್ಹ ಮಹಿಳಾ ಶಿಕ್ಷಕಿಯರಿಗೆ 180 ದಿನಗಳ ಶಿಶುಪಾಲನಾ ರಜೆಯ ಸೌಲಭ್ಯವು ಅನ್ವಯವಾಗುತ್ತದೆ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..



