ಬೆಂಗಳೂರು –
ಮತ್ತೊಂದು ಸಂಕಷ್ಟದಲ್ಲಿ ಶಾಸಕ ವಿನಯ ಕುಲಕರ್ಣಿ – ಪೊಲೀಸರ ಬಿ ರಿಪೋರ್ಟ್ ಗೆ ಅಸಮಾಧಾನ ವ್ಯಕ್ತಪಡಿಸಿ ಮರು ತನಿಖೆಗೆ ಆದೇಶ ಮಾಡಿದ ನ್ಯಾಯಾಲಯ ಧಾರವಾಡದ ಹೆಬ್ಬಳ್ಳಿ ಜಿಲ್ಲಾ ಪಂಚಾಯತ ನ ಬಿಜೆಪಿಯ ಸದಸ್ಯ ರಾಗಿದ್ದ ಯೊಗೀಶಗೌಡ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿರುವ ಧಾರವಾಡ ಗ್ರಾಮೀಣ ವಿಧಾನ ಸಭಾ ಕ್ಷೇತ್ರದ ಶಾಸಕ ವಿನಯ ಕುಲಕರ್ಣಿ ಗೆ ಮತ್ತೊಂದು ಸಂಕಷ್ಟ ಎದುರಾಗಿದೆ.
ಹೌದು ಈಗಾಗಲೇ ಈ ಒಂದು ಪ್ರಕರಣದಲ್ಲಿ ಆರೋಪಿಯಾಗಿ ಜೈಲು ಸೇರಿದ್ದ ವಿನಯ ಕುಲಕರ್ಣಿ ಅವರು ಜಾಮೀನಿನ ಮೇಲೆ ಹೊರಗಡೆ ಇದ್ದಾರೆ.ಈ ನಡುವೆ ಸಧ್ಯ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ.ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕ ವಿನಯ್ ಕುಲಕರ್ಣಿಗೆ ಮತ್ತೊಂದು ದೊಡ್ಡ ಸಂಕಷ್ಟ ಎದುರಾಗಿದೆ
ಕೊಲೆ ಕೇಸ್ ಸಂಬಂಧ ಮತ್ತೆ ತನಿಖೆ ನಡೆಸಲು ಕೋರ್ಟ್ ಆದೇಶಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ದಂತೆ ಪೊಲೀಸರು ವಿನಯ್ ಕುಲಕರ್ಣಿ ಪರ ಬಿ ರಿಪೋರ್ಟ್ ಸಲ್ಲಿಕೆ ಮಾಡಿದ್ದರು ಆದರೆ ಕರ್ನಾಟಕ ಹೈಕೋರ್ಟ್ ಈ ಒಂದು ಪೊಲೀಸರ ಬಿ ರಿಪೋರ್ಟ್ ಅನ್ನು ತಿರಸ್ಕಾರ ಮಾಡಿದ್ದು ಮತ್ತೆ ತನಿಖೆ ನಡೆಸಲು ಸೂಚಿಸಿದೆ ದೂರುದಾರ ಗುರುನಾಥ ಗೌಡ ಸಾಕ್ಷ್ಯವಾಗಿ ಸಿಡಿಯನ್ನು ನೀಡಿದ್ದರು ಪೊಲೀಸರು ಅದನ್ನು ಪರಿಗಣಿಸಿಲ್ಲ ಈ ಸಂಬಂಧ ಅಸಮರ್ಪಕ ತನಿಖೆ ನಡೆಸಿದ ಧಾರವಾಡದ ಸಬ್ ಅರ್ಬನ್ ಠಾಣೆ ಪೊಲೀಸ ರನ್ನು ಹೈಕೋರ್ಟ್ ತೀವ್ರ ತರಾಟೆಗೆ ತೆಗೆದು ಕೊಂಡಿದೆ
ಅಲ್ಲದೇ ಈ ಒಂದು ಪ್ರಕರಣವನ್ನು ಮರು ತನಿಖೆ ಮಾಡುವಂತೆ ಸೂಚನೆ ನೀಡಿದೆ.ಇನ್ನೂ ಡಿಜಿಟಲ್ ಸಾಕ್ಷ್ಯ ಪರಿಗಣಿಸದೇ ಪೊಲೀಸರು ನಿರ್ಲಕ್ಷ್ಯ ತೋರಿದ್ದಾರೆ, ಆರೋಪಿಗಳನ್ನು ತನಿಖೆಗೆ ಒಳಪ ಡಿಸದೇ ಬೇಜವಾಬ್ದಾರಿ ತೋರಿದ್ದಾರೆ. ತನಿಖೆಗೆ ಸರ್ಕಾರದ ಪೂರ್ವಾನುಮತಿ ಬೇಕೆಂದು ತಪ್ಪು ಮಾಹಿತಿ ನೀಡಲಾಗಿದೆ ತನಿಖಾಧಿಕಾರಿ ಕಾನೂನು ಅರಿಯಲು ವಿಫಲರಾಗಿದ್ದಾರೆ ಹೀಗಾಗಿ ಪ್ರಕರ ಣದ ಮರುತನಿಖೆ ನಡೆಸುವಂತೆ ನ್ಯಾಯಾಧೀಶೆ ಜೆ.ಪ್ರೀತ್ ಆದೇಶ ಹೊರಡಿಸಿದ್ದಾರೆ
ಇನ್ನು ಕೊಲೆ ಪ್ರಕರಣ ಸಂಬಂಧ ಸಾಕ್ಷಿ ನಾಶಗೊ ಳಿಸುವ ಸಾಧ್ಯತೆ ಹಿನ್ನೆಲೆಯಲ್ಲಿ ವಿನಯ್ ಕುಲಕರ್ಣಿ ಅವರಿಗೆ ಧಾರವಾಡ ಪ್ರವೇಶವನ್ನು ಈಗಾಗಲೇ ನಿರ್ಬಂಧಿಸಲಾಗಿದ್ದು ಹಲವು ಬಾರಿ ಪ್ರವೇಶ ಕೋರಿ ಕೋರ್ಟ್ಗೆ ಮನವಿ ಸಲ್ಲಿಸಿದ್ದ ವಿನಯ ಕುಲಕರ್ಣಿ ಅವರಿಗೆ ಈವರೆಗೆ ಅನುಮತಿ ಸಿಕ್ಕಿಲ್ಲ.
ಸುದ್ದಿ ಸಂತೆ ನ್ಯೂಸ್ ಬೆಂಗಳೂರು…..