ಹುಬ್ಬಳ್ಳಿಯಲ್ಲಿ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ವಿರುದ್ದ ವಾಗ್ದಾಳಿ….. ಬಾದಾಮಿ ಯಿಂದಲೇ ಸ್ಪರ್ಧೆ…..

Suddi Sante Desk

ಹುಬ್ಬಳ್ಳಿ –

ರಾಜ್ಯ ಸರ್ಕಾರದ ವಿರುದ್ಧ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ. ಹುಬ್ಬಳ್ಳಿ ಯಲ್ಲಿ ಮಾತನಾಡಿದ ಅವರು ಭ್ರಷ್ಟಾಚಾರ ದ ವಿಚಾರದಲ್ಲಿ ರಾಜ್ಯ ಸರ್ಕಾರದ ವಿರುದ್ದ ಅಸಮಾಧಾ ನವನ್ನು ವ್ಯಕ್ತಪಡಿಸಿದರು. ಇನ್ನೂ ಸುಮಲತಾ ಡ್ಯಾಂ ಬಿರುಕು ಬಿಟ್ಟಿದೆ ಎಂದು ಆರೋಪ ಮಾಡಿದ್ದಾರೆ. ಅವರ ಆರೋಪ ಮಾಡಿದ ನಂತರ ಸರ್ಕಾರ ವಾಗಲಿ,ಗಣಿ ಇಲಾಖೆ ಆದ್ರು ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಬೇಕಾಗಿತ್ತು ಸುಮಲತಾ ಕುಮಾರ ಸ್ವಾಮಿ ಪುತ್ರನನ್ನು ಸೋಲಿಸಿದ್ದಕ್ಕೆ ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ ಎಂದರು.ಇನ್ನೂ ಕೆಆರ್ ಎಸ್ ಸುತ್ತಮುತ್ತಲಿನ 20 ಕಿಲೋ ಮೀಟರ್ ಸುತ್ತಮುತ್ತ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ ಎಂದು ಸುಮಲತಾ ಆರೋಪಿಸಿದ್ದಾರೆ.

ಜೆಡಿಎಸ್ ನಾಯಕರ ಗಣಿ ಕಂಪನಿಗಳು ಇವೆ ಅಂತಾ ಆರೋಪ ಮಾಡಿದ್ದಾರೆ ಅಕ್ರಮ ಗಣಿಗಾರಿ ಕೆಯಲ್ಲಿ ಆಡಳಿತ ಪಕ್ಷ ಭಾಗಿಯಾಗಿದ್ದಕ್ಕೆ ಸರ್ಕಾರ ಧ್ವನಿ ಎತ್ತುತ್ತಿಲ್ಲ ನಾನು ಬದಾಮಿಯಿಂದ ಶಾಸಕ ನಾಗಿರುವೆ.ಮುಂದೆ ಬದಾಮಿಯಿಂದಲೇ ಸ್ಪರ್ದೆ ಮಾಡುತ್ತೇನೆ ನನಗೆ ಹಲವು ಕ್ಷೇತ್ರಗಳಿಂದ ಸ್ಪರ್ಧೆ ಮಾಡುವಂತೆ ಆಹ್ವಾನ ಇರೋದು ನಿಜ ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಸರ್ಕಾರಕ್ಕೆ ಮಾನ, ಮರ್ಯಾದೆ. ನಾಚಿಕೆ ಏನೂ ಇಲ್ಲ ಮಾಲಿನ್ಯ ಮಂಡಳಿಯ ಅಧಿಕಾರಿಯನ್ನು ವರ್ಗಾವಣೆ ಮಾಡೋಕೆ 16 ಕೋಟಿ ಡೀಲಿಂಗ್ ಮಾಡಿದ್ದು ಸುಳ್ಳಾ ಸರ್ಕಾರಕ್ಕೆ ಕೋವಿಡ್ ಹೆಸರಿನಲ್ಲಿ ಭ್ರಷ್ಟಾಚಾರ ಮಾಡೋಕೆ ಅನೂಕೂಲವಾಗಿದೆ ಕೋವಿಡ್ ಸಂದರ್ಭದಲ್ಲಿ ಪ್ರತಿಪಕ್ಷಗಳು ಸಹ ಪ್ರತಿಭಟನೆ ಮಾಡೋಕೆ ಬರಲ್ಲ ಅನ್ನೋದು ಗೊತ್ತಿದೆ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ ನಮ್ಮಲ್ಲಿ ಬಣಗಳು ಸಹ ಇಲ್ಲ ಉಪಚುನಾವಣೆ ದಿನಾಂಕ ನಿಗದಿಯಾದ ನಂತರ ಅಭ್ಯರ್ಥಿಯನ್ನು ಘೋಷಣೆ ಮಾಡುತ್ತೇವೆ ಎಂದರು.

ಜಾತಿ ಸಮೀಕ್ಷೆ ನಡೆದು ಎರಡೂವರೆ ಆಯ್ತು. ಅದರ ವರದಿಯನ್ನ ಸಲ್ಲಿಕೆ ಮಾಡಲಾಗಿದೆ. ಆ ಕುರಿತು ಸದನದಲ್ಲಿ ಚರ್ಚೆ ಆಗುತ್ತಿಲ್ಲ ಚರ್ಚೆ ಮಾಡಿದ್ರೆ ಸಾಮಾಜಿಕ ನ್ಯಾಯ ಒದಗಿಸಬೇಕಾಗುತ್ತದೆ. ಹೀಗಾಗಿ ಆ ಬಗ್ಗೆ ಚರ್ಚೆ ಮಾಡುತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.

Share This Article
WhatsApp

Don't Miss Out! Join Our WhatsApp Group Today!

Get the latest news, updates, and exclusive content delivered straight to your WhatsApp.