ಹುಬ್ಬಳ್ಳಿ –
ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಕೈ ಕಮಲಗಳ ಜಟಾಪಟಿ ನಡೆಯುತ್ತಲೇ ಇವೆ.ಈ ನಿಟ್ಟಿನಲ್ಲಿ ಒಂದು ಕಡೆ ಹುಬ್ಬಳ್ಳಿ ಯಲ್ಲಿ ಬಿಜೆಪಿ ಕಾರ್ಯಕಾರಣಿ ಸಭೆ ಆದರೆ ಇನ್ನೊಂದು ಕಡೆ ಕಾಂಗ್ರೆಸ್ ಪ್ರತಿಭಟನೆ ನಡೆಸುತ್ತಿರುವುದು ಸಾಕಷ್ಟು ಕುತೂಹಲಕ್ಕೆ ಕಾರಣವಾಗಿದೆ.ಅಲ್ಲದೆ ಕಸ ತುಂಬಿದ ವಾಹನದಲ್ಲಿ ಮೋದಿಯವರ ಭಾವಚಿತ್ರವನ್ನು ಇಟ್ಟು ವಿನೂತನ ಪ್ರತಿಭಟನೆ ನಡೆಸಿದ್ದಾರೆ.
ಹೌದು.. ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಬಿಜೆಪಿ ಕಾರ್ಯ ಕಾರಣಿ ಸಭೆಯನ್ನು ಹಮ್ಮಿಕೊಳ್ಳಲಾಗಿದೆ.ಈ ನಿಟ್ಟಿನಲ್ಲಿ ಕಾಂಗ್ರೆಸ್ ಪಕ್ಷ ನಾಯಕರ ಹಾಗೂ ಕೇಂದ್ರ ಸಚಿವ ಕಣ್ಣು ತೆರೆಸಲು ವಿನೂತನ ಪ್ರಯತ್ನಕ್ಕೆ ಮುಂದಾಗಿದೆ.
ಇನ್ನೂ ಬಿಜೆಪಿಯವರಿಗೆ ಕಾಂಗ್ರೆಸ್ ಪ್ರತಿಭಟನೆ ಮುಜುಗರ ಉಂಟು ಮಾಡಿದೆ.ನಗರದ ಮಹಾನಗರ ಪಾಲಿಕೆ ಕಚೇರಿ ಮುಂದೆ ಕಾಂಗ್ರೆಸ್ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.ಟ್ರ್ಯಾಕ್ಟ್‌ರ್‌ನಲ್ಲಿ ಕಸ ತುಂಬಿಕೊಂಡು ಬಂದು ಪಾಲಿಕೆ ಎದುರು ವಿನೂತನವಾಗಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಮುಖಂಡರು ಹುಬ್ಬಳ್ಳಿ ಯನ್ನು ಕಸ ಮುಕ್ತವನ್ನಾಗಿ ಮಾಡಲು ಬಿಜೆಪಿಯವರಿಗೆ ಆಗಿಲ್ಲ ಎಂದರು.
ಕಳೆದ ಒಂದು ವಾರದಿಂದ ಕಸ ವಿಲೇವಾರಿ ಮಾಡಿಲ್ಲ. ನಗರ ವನ್ನು ಸ್ವಚ್ಛವಾಗಿಡಲು ಬಿಜೆಪಿ ವಿಫಲವಾಗಿದೆ ಎಂದು ಕಾಂಗ್ರೆಸ್ ವಿನೂತನ ಪ್ರತಿಭಟನೆ ಮೂಲಕ ಎಚ್ಚರಿಕೆ ನೀಡಿದರು
ಬಿಜೆಪಿ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಎಲ್ಲಾ ಪೌರ ಕಾರ್ಮಿಕರನ್ನು ಬಿಜೆಪಿಯವರು ತಮ್ಮ ಕಾರ್ಯಕ್ರಮದ ಸ್ವಚ್ಚತಾ ಕಾರ್ಯಕ್ಕೆ ಬಳಿಸಿಕೊಂಡಿದ್ದಾರೆ.ಕಸ ತುಂಬಿ ಕೊಂಡು ಸರ್ಕಾರದ ವಿರುದ್ಧ ಕಾಂಗ್ರೆಸ್ ಪ್ರತಿಭಟನೆ ನಡೆಸಿದ್ದು ಪ್ರತಿಭಟನೆ ವೇಳೆ ಪೊಲೀಸರು ಮತ್ತು ಕಾಂಗ್ರೆಸ್ ಮುಖಂಡರ ನಡುವೆ ಮಾತಿನ ಚಕಮಕಿ ನಡೆದಿದೆ.