ಹುಬ್ಬಳ್ಳಿ –
ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಹಾಡ ಹಗಲೇ ವ್ಯಕ್ತಿಯೊಬ್ಬನಿಗೆ ಚಾಕು ಹಾಕಿರುವ ಘಟನೆ ಹಳೇ ಬಸ್ ನಿಲ್ದಾಣದಲ್ಲಿ ನಡೆದಿದೆ.ಮೂಲತಃ ಗದಗ ಜಿಲ್ಲೆ ರೋಣ ತಾಲೂಕಿನ ನರೇಗಲ್ ಗ್ರಾಮದ ಬಷೀರ ಅಹ್ಮದ ಹಂಚಿನಮನಿ ಎಂಬಾತನಿಗೆ ಚಾಕುವಿನಿಂದ ಇರಿಯಲಾಗಿದೆ.

ಈತ ಹಳೇ ಬಸ್ ನಿಲ್ದಾಣದ ಬಳಿ ಎಳೆನೀರು ಮಾರಾಟ ಮಾಡುತ್ತಿದ್ದ. ಘಟನೆಯು ಕಲಘಟಗಿ ಬಸ್ ನಿಲ್ಲುವ ಸ್ಥಳದಲ್ಲಿ ಆಗಿದೆ.

ಎಳನೀರು ಮಾರಾಟ ಮಾಡುತ್ತಿದ್ದ ಸಮಯದಲ್ಲಿ ಬಂದು ದುಷ್ಕರ್ಮಿಗಳು ಎದೆಯ ಕೆಳಭಾಗದಲ್ಲಿ ಚಾಕುವಿನಿಂದ ಇರಿಯಲಾಗಿದ್ದು, ತೀವ್ರವಾಗಿ ಗಾಯಗೊಂಡಿರುವ ವ್ಯಕ್ತಿಗೆ ಚಿಕಿತ್ಸೆಯನ್ನ ನೀಡ ಲಾಗುತ್ತಿದೆ.ಇನ್ನೂ ಉಪನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ವನ್ನು ಕೈಗೊಂಡಿದ್ದಾರೆ.