ಹುಬ್ಬಳ್ಳಿ –

ಆಟೋಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆಟೋ ದಲ್ಲಿದ್ದ ಇಬ್ಬರು ಸಾವನ್ನಪ್ಪಿದ ಘಟನೆ ಹುಬ್ಬಳ್ಳಿ ಯಲ್ಲಿ ನಡೆದಿದೆ.ನಗರದ ಹೊರವಲಯದ ಗಬ್ಬೂರ ಬೈಪಾಸ್ ಬಳಿಯಲ್ಲಿ ಈ ಒಂದು ಅಪಘಾತ ನಡೆದಿದೆ. ಲಾರಿಯೊಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ,ಆಟೋದಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದು, ರಸ್ತೆಯಲ್ಲಿ ರಕ್ತ ಮಡುವುಗಟ್ಟಿದೆ.ಹುಬ್ಬಳ್ಳಿಯಿಂದ ಹೊರಟಿದ್ದ ಆಟೋಗೆ ಲಾರಿಯು ಡಿಕ್ಕಿ ಹೊಡೆದಿದೆ. ಇದರಿಂದ ಆಟೋದ ಚಾಲಕ ಹಾಗೂ ಓರ್ವ ಪ್ರಯಾಣಿಕ ಸ್ಥಳದಲ್ಲಿಯೇ ಸಾವಿಗೀಡಾಗಿದ್ದು ದೇಹಗಳೆರಡು ಚೆಲ್ಲಾಪಿಲ್ಲಿಯಾಗಿ ಬಿದ್ದಿವೆ.ಇನ್ನೂ ಅಪಘಾತದಲ್ಲಿ ಮೃತಪಟ್ಟವರ ಬಗ್ಗೆ ಮಾಹಿತಿ ಲಭ್ಯವಾಗಬೇಕಿದೆ

ಇನ್ನೂ ಘಟನೆ ನಡೆಯುತ್ತಿದ್ದ ಹಾಗೇ ಸ್ಥಳದಲ್ಲಿ ಸಾರ್ವಜನಿಕರು ಜಮಾಯಿಸಿದ್ದು ಪೊಲೀಸರು ರಸ್ತೆ ಸಂಚಾರವನ್ನು ಸುಗಮಗೊಳಿಸುತ್ತಲೇ ಅಂಬ್ಯು ಲೆನ್ಸ್ ಮೂಲಕ ಶವಗಳನ್ನು ಕಿಮ್ಸಗೆ ರವಾನೆ ಮಾಡಿದ್ದಾರೆ.ಉತ್ತರ ಸಂಚಾರಿ ಠಾಣೆ ವ್ಯಾಪ್ತಿಯಲ್ಲಿ ಈ ಒಂದು ಅಪಘಾತ ನಡೆದಿದೆ. ಅಪಘಾತದಲ್ಲಿ ಸಾವಿಗೀಡಾದವರ ಮಾಹಿತಿಯನ್ನು ಪೊಲೀಸರು ಪ್ರಕರಣದ ಬಗ್ಗೆ ಮಾಹಿತಿಯನ್ನ ಕಲೆ ಹಾಕುತ್ತಿದ್ದಾರೆ.